ವಿಜಯಪುರ: ಎಂ.ಬಿ.ಪಾಟೀಲರಿಗೆ 'ಪರ್ಯಾವರಣ ರಕ್ಷಕ ಸಮ್ಮಾನ' ಪ್ರಶಸ್ತಿ
ಲೋಕದರ್ಶನ ವರದಿ
ವಿಜಯಪುರ 13: ರಾಜಸ್ಥಾನದ ತರುಣ್ಭಾರತ ಸಂಘದಿಂದ ಪ್ರತಿ ವರ್ಷ ನೀಡುವ "ಪಯರ್ಾವರಣ ರಕ್ಷಕ ಸಮ್ಮಾನ-2019" ಪ್ರಶಸ್ತಿ ಕನರ್ಾಟಕ ಸಕರ್ಾರದ ಮಾಜಿ ಜಲಸಂಪನ್ಮೂಲ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ರವರಿಗೆ ನೀಡಲಾಗಿದೆ.
ಎಂ.ಬಿ.ಪಾಟೀಲ್ರವರು ಪರಿಸರ ರಕ್ಷಣೆಯಲ್ಲಿ ಕೈಗೊಂಡಿರುವ ವಿವಿಧ ಕಾರ್ಯಗಳನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನೀರಿನ ಗಾಂಧಿ ಎಂದೆ ಖ್ಯಾತರಾದ, ಡಾ.ರಾಜೇಂದ್ರ ಸಿಂಗ್ ಸ್ಥಾಪಿಸಿದ ತರುಣ್ ಭಾರತ ಸಂಘ ರಾಜಸ್ಥಾನದ ಆಳ್ವಾರ್ ಜಿಲ್ಲೆಯ ಬಿಕಾಂಪುರ ಗ್ರಾಮದಲ್ಲಿ ಪ್ರತಿ ವರ್ಷ ಸಂಕ್ರಾಂತಿಯ ಶುಭದಿನದಂದು ರಾಷ್ಟ್ರದಾದ್ಯಂತ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.
ಮಕರ ಸಂಕ್ರಮಣ ದಿನ ದಿ.15ರಂದು ಬುಧವಾರ ಬೆ.9ಗಂ. ರಾಜಸ್ಥಾನದ ತರುಣ್ ಭಾರತ ಸಂಘ ಆಶ್ರಮದಲ್ಲಿ ಈ ಪ್ರಶಸ್ತಿಯನ್ನು ಮಹಾತ್ಮಾ ಗಾಂಧಿಯವರ ಮೊಮ್ಮಗ ಅರುಣ ಗಾಂಧಿ ನೀಡಲಿದ್ದು, ಎಂ.ಬಿ.ಪಾಟೀಲ್ ಉಪಸ್ಥಿತರಿದ್ದು, ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಎಂ.ಬಿ.ಪಾಟೀಲ್ ಜಲಸಂಪನ್ಮೂಲ ಸಚಿವರಾಗಿದ್ದಾಗ ರಾಜ್ಯದಾದ್ಯಂತ ಕೈಗೊಂಡ ಕೆರೆ ತುಂಬುವ ಯೋಜನೆಗಳು ಪರಿಸರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿವೆ. ಆ ಕೆರೆಯ ಸುತ್ತಲಿನ ಪ್ರದೇಶದಲ್ಲಿ ಜೀವ ವೈವಿದ್ಯತೆ ಪುರ್ನಸ್ಥಾಪಿಸುವಲ್ಲಿ ಈ ಯೋಜನೆ ಯಶಸ್ಸು ಕಂಡಿದೆ. ಮತ್ತು ವಿಜಯಪುರ ನಗರ ಹೊರವಲಯದ ಭೂತನಾಳ ಹತ್ತಿರ 500ಎಕರೆ ಪ್ರದೇಶದಲ್ಲಿ 60ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತಿರುವದನ್ನು ಪ್ರಶಸ್ತಿ ಆಯ್ಕೆ ಸಮಿತಿ ಪರಿಗಣಿಸಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 