ವಿಜಯಪುರ 20: ಜಿಲ್ಲೆ ಕೊಲ್ಹಾರ ಪಟ್ಟಣದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ನದಿಗೆ ಹಾರಿ ಪಾಶ್ರ್ವವಾಯು ಪೀಡಿತ ರೋಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದ ಸಿದ್ರಾಮಪ್ಪ ಬಿರಾದಾರ (60) ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲಿಸ್, ಅಗ್ನಿಶಾಮಕ ಸಿಬ್ಬಂದಿ, ಸಿದ್ರಾಮಪ್ಪ ಅವರನ್ನು ರಕ್ಷಿಸಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದೆ.
ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದೆ.