ವಿಜಯಪುರ: ನ.25ರಿಂದ ಡಿ.10ರವರೆಗೆ ಜಿಲ್ಲೆಯಾದ್ಯಂತ ಸಕ್ರೀಯ ಕ್ಷಯರೋಗ ಪತ್ತೆ-ಚಿಕಿತ್ಸಾ ಆಂದೋಲನಕ್ಕೆ ಸೂಚನೆ

ಲೋಕದರ್ಶನ ವರದಿ

ವಿಜಯಪುರ 20; ಇದೇ ನವೆಂಬರ್ 25ರಿಂದ ಬರುವ ಡಿಸೆಂಬರ್ 10ರವರೆಗೆ ಜಿಲ್ಲೆಯಾದ್ಯಂತ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗಂಡಾಂತರ ಹಾಗೂ ವೈದ್ಯಕೀಯ ಸೇವೆಯಿಂದ ವಂಚಿತ ಪ್ರದೇಶಗಳು, ಕೊಳಚೆ, ಔದ್ಯೋಗಿಕ ಕ್ಷೇತ್ರಗಳು ಸೇರಿದಂತೆ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಕ್ಷಯರೋಗಿಗಳ ಪತ್ತೆ ಕಾರ್ಯ ಚುರುಕುಗೊಳಿಸಬೇಕು. ಜನರ ಮನೆ ಬಾಗಿಲಿಗೆ ತಲುಪುವ ಮೂಲಕ ವ್ಯವಸ್ಥಿತ ಕ್ಷಯರೋಗ ಪತ್ತೆ ಹಚ್ಚುವ ಜೊತೆಗೆ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ಕಟ್ಟಡ ನಿರ್ಮಾಣ ಕಾಮರ್ಿಕರು, ಅಸಂಘಟಿತ ಕಾಮರ್ಿಕರು ಅನಾಥಾಶ್ರಮಗಳು, ನಿರ್ಗತಿಕ ವಸತಿಗಳು, ಕೊಳಚೆ ಪ್ರದೇಶಗಳು, ವೃದ್ಧಾಪ್ಯ ಕೇಂದ್ರಗಳು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕ್ಷಯರೋಗ ಪತ್ತೆ-ಚಿಕಿತ್ಸಾ ಆಂದೋಲನ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಸಕರ್ಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಎಚ್ಐವಿ-ಟಿಬಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಕರು ಮತ್ತು ಮಕ್ಕಳಲ್ಲಿ ಅರಿವು ಮೂಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕಾರ್ಯಕತರ್ೆಯರು ಸಕ್ರೀಯವಾಗಿ ಭಾಗವಹಿಸುವ ಕುರಿತು ಕ್ರಮ ಕೈಗೊಳ್ಳಬೇಕು. ವಿಶೇಷ ಚಿಕಿತ್ಸಾ ಹಾಗೂ ಕ್ಷಯರೋಗಿಗಳ ಪತ್ತೆ ಹಚ್ಚುವಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುವಂಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನೋ-ಸ್ಕಾಲ್ಪೆಲ್ ವೆಸಕ್ಟಮಿ ಶಿಬಿರ (ಉದರದರ್ಶಕ ಸಂತಾನ ಹರಣಶಸ್ತ್ರ ಚಿಕಿತ್ಸೆ) :  

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ ನವೆಂಬರ್ 21ರಿಂದ ಡಿಸೆಂಬರ್ 4ರವರೆಗೆ ಎಲ್ಲ ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉದರದರ್ಶಕ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಸಂಬಂಧಪಟ್ಟವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ಕಾರ್ಯಕ್ರಮದ ಘೋಷವಾಕ್ಯ ಕುಟುಂಬ ಯೋಜನೆಯಲ್ಲಿ ಪಾಲ್ಗೊಳ್ಳುವುದು ಜವಾಬ್ದಾರಿಯುತ ಪುರುಷನ ಲಕ್ಷಣ ಎಂದು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ ಅವರು ತಿಳಿಸಿದ್ದಾರೆ.

ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಸ್.ಎಲ್.ಲಕ್ಕಣ್ಣವರ, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಐ.ಎಸ್.ಧಾರವಾಡಕರ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಮಹೇಶ ನಾಗರಬೆಟ್ಟ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸಂಪತ್ಕುಮಾರ ಗುಣಾರಿ, ಡಾ.ರಾಜೇಶ್ವರಿ ಗೊಲಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.