ವಿಜಯಪುರ: ಪಿಂಚಣಿ ಅದಾಲತ್ ಕಾರ್ಯಕ್ರಮ

ಲೋಕದರ್ಶನ ವರದಿ

ವಿಜಯಪುರ 06: ತಾಲೂಕಿನ ಕತಕನಹಳ್ಳಿ ಗ್ರಾಮದಲ್ಲಿ ದಿಕ: 06 ಶನಿವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಿಂಚಣಿ ಅದಾಲತ್ನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಉಪವಿಭಾಗಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಇವರು ಮಾತನಾಡಿ ವಿವಿಧ ಸಮಾಜಿಕ ಭದ್ರತೆ ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೋಬಳಿ ಮಟ್ಟದಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ, ಇಂದಿರಾಗಾಂಧಿ ರಾಷ್ಟ್ರೀಯ ಕುಟುಂಬ ಯೋಜನಾ ನೇರವಾಗಿ ಫಲಾನುವಭವಿಗಳಿಗೆ ತಲುಪಿಸಲು ಇಂತಹ ಅದಾಲತ್ಗಳನ್ನು ಹಮ್ಮಿಕೊಳ್ಳುವುದು ಅವಶ್ಯಕವಾಗಿದೆ. ಎಲ್ಲ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಫಲಾನುವಭವಿಗಳಿಗೆ ಆದೇಶ ಪತ್ರವನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ತಹಶಿಲ್ದಾರ ವಿಜಯಪುರ ಜಿ.ಎಸ್. ಹಿರೇಮಠ, ಜಿ.ಎಸ್. ರಾಜಾಪೂರ ಕಂದಾಯ ನಿರೀಕ್ಷಕರು, ಎಮ್.ಕೆ. ಸೋಮನಿಂಗ ಗ್ರಾಮ ಲೆಕ್ಕಾಧಿಕಾರಿ ಎಸ್.ಕೆ. ರಾಠೋಡ ಮುಂತಾದವರು ಉಪಸ್ಥಿತರಿದ್ದರು.