ವಿಜಯಪುರ: 14ರಂದು ಸಿದ್ದೇಶ್ವರ ಜಯಂತಿ ಆಚರಣೆVijayapura: Siddheshwar Jayanti Celebration on 14th
Lokadrshan Daily
1/2/25, 3:47 PM ಪ್ರಕಟಿಸಲಾಗಿದೆ
ಲೋಕದರ್ಶನ ವರದಿ
ವಿಜಯಪುರ 08: ಮಹಾನ ಶರಣರಾದ ಶ್ರೀ ಸಿದ್ದೇಶ್ವರ ಜಯಂತಿಯನ್ನು ದಿ: 14-1-2020 ರಂದು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಸಿದ್ದೇಶ್ವರ ಜಯಂತಿಯ ಪೂರ್ವಭಾವಿ ಸಭೆ ನಡೆಸಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ಲ ಹನುಮಂತರಾಯ ರಂಗಮಂದಿರವರೆಗೆ ಶ್ರೀ ಸಿದ್ದೇಶ್ವರ ಭಾವಚಿತ್ರ ಮೆರವಣಿಗೆ. ಜಯಂತಿ ನಿಮಿತ್ಯ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ವಚನಗಾಯನ ಹಾಗೂ ಉಪನ್ಯಾಸ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಸಿದ್ದೇಶ್ವರ ಸಂಸ್ತೆಯ ಸದಸ್ಯರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿದರ್ೇಶಕ ಮಹೇಶ ಪೋತದಾರ ಸ್ವಾಗತಿಸಿದರು.