ಲೋಕದರ್ಶನ ವರದಿ
ವಿಜಯಪುರ 27: ಇಲ್ಲಿನ ಬಿ.ಎಲ್.ಡಿ.ಇ. ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಯುವ ಪೀಳಿಗೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಸಕ್ತಿ ಬೆಳೆಸಲು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾಥರ್ಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಆವಿಷ್ಕಾರ 2019 ನ್ನು ಇದೇ ದಿ. 28 ರಂದು ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದೆ.
ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಬಿ.ಎಲ್.ಡಿ.ಇ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವ್ಹಿ.ಪಿ.ಹುಗ್ಗಿ ಹಾಗೂ ವಿಜ್ಞಾನ ವಸ್ತುಪ್ರದರ್ಶನದ ಸಂಯೋಜಕ ಡಾ. ಎಸ್.ಎಸ್. ಛಪ್ಪರ ಅವರು, ವಿದ್ಯಾಥರ್ಿಗಳಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ, ವಿಜ್ಞಾನ ಹಗೂ ತಂತ್ರಜ್ಞಾನದಲ್ಲಿ ಆಸಕ್ತಿ ಬೆಳೆಸುವ ಉದ್ದೇಶದಿಂದ ಈ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದ್ದು, ವಿಜಯಪುರ, ಬಾಗಲಕೋಟ, ಬೆಳಗಾವಿ ಹಾಗೂ ಕಲಬುರ್ಗಿ ಜಿಲ್ಲೆಗಳಿಂದ ಸುಮಾರು 300 ಕ್ಕೂ ಅಧಿಕ ವಿದ್ಯಾಥರ್ಿ ತಂಡಗಳು ಭಾಗವಹಿಸಿ ವಿಜ್ಞಾನದ ಮಾದರಿ (ಪ್ರಾತ್ಯಕ್ಷಿಕೆ)ಗಳನ್ನು ಪ್ರದಶರ್ಿಸಲಿದ್ದಾರೆ ಎಂದು ಹೇಳಿದರು.
ಈ ವಸ್ತು ಪ್ರದರ್ಶನದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾಥರ್ಿಗಳು ವಸ್ತು ಪ್ರದರ್ಶನ ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ. ಕಾಲೇಜಿನ ಕ್ರೀಡಾಂಗಣದಲ್ಲಿ 150 ಸ್ಟಾಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರದರ್ಶನದಲ್ಲಿ ಭಾಗವಹಿಸುವ ಪಿಯುಸಿ ವಿಜ್ಞಾನ ವಿದ್ಯಾರ್ಥಿ ಗಳಿಗೆ ಉಚಿತ ಸಾರಿಗೆ, ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರದರ್ಶನದ ಮಾದರಿಗಳನ್ನು ತಯಾರಿಸಲು ಸಂಸ್ಥೆಯ ವತಿಯಿಂದ ಒಂದು ಸಾವಿರ ರೂ. ಪ್ರೋತ್ಸಾಹ ಧನ ಕೊಡಲಾಗುವುದು. ಅತ್ಯುತ್ತಮ ಪ್ರದರ್ಶನಕ್ಕೆ ಆಯ್ಕೆಯಾದ ಮೂರು ತಂಡಕ್ಕೆ ಪ್ರಥಮ ಬಹುಮಾನ 25 ಸಾವಿರ ರಊ, ದ್ವಿತೀಯ ಬಹುಮಾನ 15 ಸಾವಿರ ರೂ., ಮತ್ತು ತೃತೀಯ ಬಹುಮಾನ 10 ಸಾವಿರ ರೂ., ನಗದು ನೀಡಲಾಗುವುದು. ಅಲ್ಲದೇ, ತಲಾ ಐದು ಸಾವಿರ ರೂ.ಗಳಂತೆ ಐದು ಸಮಧಾನಕರ ಬಹುಮಾನ ನೀಡಲಾಗುವುದು ಎಂದು ಅವರು ವಿವರಿಸಿದರು.
ಇದೇ ದಿನ ಬಿ.ಎಲ್.ಡಿ.ಇ.ಓಪನ್ ಡೇ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ವಿಜ್ಞಾನ ವಸ್ತು ಪ್ರದರ್ಶನದ ಜೊತೆಗೆ ನಮ್ಮ ತಾಂತ್ರಿಕ ಮಹಾವಿದ್ಯಾಳಯದ ಸೌಲಭ್ಯಗಳನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ವಿಜ್ಞಾನ ವಸ್ತು ಪ್ರದರ್ಶನ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ವಸ್ತು ಪ್ರದರ್ಶನ ವೀಕ್ಷಣೆಗೆ ಮುಕ್ತ ಅವಕಾಶವಿದೆ. ಅಂದೇ ಮಧ್ಯಾಹ್ನ 3 ಗಂಟೆಗೆ ವಸ್ತು ಪ್ರದರ್ಶನದಲ್ಲಿ ಆಯ್ಕೆಯಾದ ಅತ್ಯುತ್ತಮ ತಂಡಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಲಿದ್ದು, ಬೆಂಗಳೂರಿನ ರಾಮಯ್ಯ ವಿಶ್ವವಿದ್ಯಾಳಯದ ಪ್ರೊ. ಜಯತೀರ್ಥ ಮುದಕವಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಜೇತ ವಿದ್ಯಾಥಿಗಳಿಗೆ ಬಹುಮಾನ ವಿತರಿಸುವರು. ಗೌರವ ಅತಿಥಿಗಳಾಗಿ ಎಚ್.ಎ.ಎಲ್. ಮ್ಯಾನೇಜ್ಮೆಂಟ್ ಅಕೆಡೆಮಿಯ ಡಾ. ಶಿವಪ್ರಸಾದ ಸಿ.ಜಿ., ಪದವಿಪೂರ್ವ ಶಿಕ್ಷಣ ಇಲಾಖೆ, ವಿಜಯಪುರ ಜಿಲ್ಲೆಯ ಉಪನಿರ್ದೇಶಕ ಜನಗೊಂಡ ಪೂಜೇರಿ ಹಾಗೂ ಬಾಗಲಕೋಟ ಜಿಲ್ಲೆಯ ಉಪನಿರ್ದೇಶಕ ಶಶಿಧರ ಪೂಜಾರಿ ಹಾಗೂ ಬಿ.ಎಲ್.ಡಿ.ಇ. ಸಂಸ್ಥೆಯ ನಿರ್ದೇಶಕ ಬಸನಗೌಡ ಎಂ.ಪಾಟೀಲ, ಆಡಳಿತಾಧಿಕಾರಿ ಡಾ.ಆರ್.ವ್ಹಿ.ಕುಲಕಣರ್ಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಬಿ.ಎಲ್.ಡಿ.ಇ ತಾಂತ್ರಿಕ ಮಹಾದ್ಯಾಲಯದ ಉಪಪ್ರಾಚಾರ್ಯ ಬಿ.ಕೆ.ಗುನ್ನಾಗರ, ಪಿ.ವಿ.ಮಳಜಿ, ಡಾ.ಮಹಾಂತೇಶ ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.