ವಿಜಯಪುರ: ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿಗಳಿಂದ ಅನಿರೀಕ್ಷಿತ ಭೇಟಿ

ವಿಜಯಪುರ 22: ನಗರದ ಗಾಂಧಿ ಚೌಕ ಹತ್ತಿರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ನಂ-1 ಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅನಿರಿಕ್ಷಿತವಾಗಿ ಇಂದು ಭೇಟಿ ನೀಡಿದರು. ಸರಕಾರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿದ ಅವರು,ಶಾಲಾ ಮಕ್ಕಳೊಂದಿಗೆ ಮಾತನಾಡಿ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಬಿಸಿಯೂಟ, ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಆಲಿಸಿದರು.