ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ.
Vijayapura City Rounds were conducted by DC Dr. Ananda K.
ವಿಜಯಪುರ 24 : ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರೀಶೀಲನೆ ನಡೆಸಿದರು.
ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರೀಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ ಹಾಗೂ ಹಣದ ಉಳಿತಾಯವಾಗಿ, ಸಾರ್ವಜನಿಕರ ಕಚೇರಿ ಅಲೆದಾಟವು ತಪ್ಪಿದಂತಾಗುತ್ತದೆ. ಇದರಿಂದ ಅತ್ಯಂತ ಅನುಕೂಲವಾಗಲಿದ್ದು, ಈ ಕಾರ್ಯವನ್ನು ಸಮರ್ಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರೀಶೀಲನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ನಿಲ್ದಾಣದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಪರೀಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಕವಾಗಿ ಕಲ್ಪಿಸಬೇಕು. ನಿಲ್ದಾಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ, ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಒದಗಿಸಬೇಕು. ಆವರಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಸಮರ್ಕವಾಗಿ ನಿರ್ವಹಣೆ ಮಾಡುವ ಜೊತೆಗೆ ಕಾಲಕಾಲಕ್ಕೆ ಸಂಬಂಧಿಸಿದ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಗುಣಮಟ್ಟದ ಆಹಾರ ಪೂರೈಕೆಗೆ ಕುರಿತು ಪರೀಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ, 250 ಹಾಸಿಗೆವುಳ್ಳ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಕಾಮಗಾರಿಯನ್ನು ಪರೀಶೀಲನೆ ನಡೆಸಿದ ಅವರು ಆಸ್ಪತ್ರೆಯ ತಾಯಿ ಮಕ್ಕಳ ವಾರ್ಡ, ನವಜಾತ ಶಿಶು ವಿಭಾಗ, ಸಿಟಿ ಎಂಆರ್‌ಐ ಸ್ಕ್ಯಾನ್ ಸೆಂಟರ್, ನೇತ್ರ ವಿಭಾಗ, ಎನ್‌ಆರ್‌ಸಿ ಕೇಂದ್ರ, ಕ್ಷಕಿರಣ ವಿಭಾಗ, ತುರ್ತು ಘಟಕ ವಿಭಾಗಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಆಸ್ಪತ್ತೆ ಬರುವ ರೋಗಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಉತ್ತಮ ಚಿಕಿತ್ಸೆ ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು. ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 