ವಿಜಯಪುರ ಮೆಡಿಕಲ್ ಕಾಲೇಜು ನನಸಾಗುವುದೇ ಕನಸು
Vijayapura Medical College is a dream come true
ವಿಜಯಪುರ 05 : ಜಿಲ್ಲೆಯ ಐತಿಹಾಸಿಕವಾಗಿ ಸಾಂಸ್ಕೃತಿಕವಾಗಿ ಕೃಷಿ ಪ್ರಧಾನವಾದ ಜಿಲ್ಲೆ. 1956ರಲ್ಲಿ ಜಿಲ್ಲೆಯಾಗಿ ಆಡಳಿತ ನಡೆಸಿಕೊಂಡು ಬಂದರೂ ಇಲ್ಲಿ ಇನ್ನೂ ಸರ್ಕಾರಿ ವೈದ್ಯಕೀಯ ಕಾಲೇಜು ಆಗಿರಲಿಲ್ಲ; ಸುಮಾರು ಎರಡು ದಶಕಗಳಿಂದಲೂ ಸ್ಥಳೀಯ ವಿದ್ಯಾರ್ಥಿಗಳು ಮತ್ತು ಪ್ರಗತಿಪರ ಸಂಘಟನೆಗಳು ಸರಕಾರಕ್ಕೆ ಮತ್ತು ಈ ಭಾಗದ ಶಾಸಕರಿಗೆ, ಸಚಿವರುಗಳಿಗೆ ಮನವಿ ಪತ್ರ ಸಲ್ಲಿಸಿದರು ಯಾವುದೇ ಪ್ರಯೋಜನ ಆಗಿರಲಿಲ್ಲ; ಇಲ್ಲಿ ಎಲ್ಲ ಸೌಲಭ್ಯಗಳುಳ್ಳ ದೊಡ್ಡ ಜಿಲ್ಲಾ ಸರಕಾರಿ ಆಸ್ಪತ್ರೆ ಇದೆ. ಜಿಲ್ಲೆಯ ಸುತ್ತಮುತ್ತಲಿನ ಹಳ್ಳಿಗಳಿಂದ ಸುಮಾರು ಸಾವಿರದ ಐದುನೂರು ಹೊರರೋಗಿಗಳು ಮತ್ತು ಒಳರೋಗಿಗಳು ಬಂದು ಹೋಗುತ್ತಿದ್ದಾರೆ,
ಉತ್ತಮ ಚಿಕಿತ್ಸೆ,ಮತ್ತು ರೋಗಿಗಳ ಮುತುವರ್ಜಿ ವಹಿಸಿ ಕಾಳಜಿ ಮಾಡುವ ದಾರಿಯರು ಮತ್ತು ವೈದ್ಯರಿದ್ದಾರೆ. ತಾಯಿ ಮಕ್ಕಳ ಆರೋಗ್ಯ ಆಸ್ಪತ್ರೆ ಇದೆ. ಆಧುನಿಕ ಉಪಕರಣಗಳುಳ್ಳ ಸ್ಕ್ಯಾನಿಂಗ್ ಸೆಂಟರ್ ಇದೆ. 149 ಎಕರೆ ಭೂಮಿ ಇದೆ. ಇಷ್ಟೆಲ್ಲಾ ಸಂಪನ್ಮೂಲಗಳುಳ್ಳ ಆಸ್ಪತ್ರೆ ಇದ್ದರೂ ಸರ್ಕಾರ ಆಸ್ಪತ್ರೆಯ ಪಕ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸಲು ಹಿಂದೇಟು ಹಾಕುತ್ತಿತ್ತು ಸಾರ್ವಜನಿಕ ಸಂಘ ಸಂಸ್ಥೆಗಳು ಹಲವು ವರ್ಷಗಳಿಂದ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಾಗಬೇಕೆಂದು ಒತ್ತಾಯಿಸುತ್ತಾ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಜಯಪುರದಲ್ಲಿ ಸರ್ಕಾರಿ ವೈದ್ಯಕಿಯ ಮಹಾವಿದ್ಯಾಲಯ ಸ್ಥಾಪಿಸಲು ನಿರ್ಧರಿಸಿತು.
ದುರ್ದೈವದ ಸಂಗತಿ ಎಂದರೆ ಅದನ್ನು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲು ಮುಂದಾಗಿರುವುದನ್ನು ಖಂಡಿಸಿ ವಿಜಯಪುರ ಜಿಲ್ಲೆಯಲ್ಲಿ 106 ದಿನಗಳ ಕಾಲ ಸುದೀರ್ಘ ಹೋರಾಟವನ್ನು ಮಾಡಿದ್ದರ ಪರಿಣಾಮ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಾವೇರಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಲೋಕಾರೆ್ಣ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಸಮ್ಮುಖದಲ್ಲಿ ಸಾರ್ವಜನಿಕವಾಗಿ ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ ಜೊತೆಗೆ ವಿಜಯಪುರ ನಗರದಕ್ಕೆ ಆಗಮಿಸಿದಾಗ ಮತ್ತೆ ಪುನಃ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸುತ್ತೇನೆ ಎಂದು ಹೇಳಿರುವುದು ಸಂತಸದ ವಿಷಯ.
ಹೋರಾಟದ ಸಂದರ್ಭದಲ್ಲಿ ಆರು ಜನ ಹೋರಾಟಗಾರರು 14 ದಿನಗಳ ಕಾಲ ಸೆರೆಮನೆವಾಸ. 27 ಜನ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದು ಕೂಡ ಈಗ ಇತಿಹಾಸ. ಇಂತಹ ಸುದೀರ್ಘ ಹೋರಾಟದ ಫಲವಾಗಿ ಇಂದು ಮಂಡಿಸುವ ಬಜೆಟ್ ನಲ್ಲಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಾಗುತ್ತದೆ ಎಂಬ ಬಹುದೊಡ್ಡ ನೀರೀಕ್ಷೆಯನ್ನು ಜಿಲ್ಲೆಯ ಜನ ಇಟ್ಟುಕೊಂಡಿದ್ದಾರೆ. ಜನರ ನೀರೀಕ್ಷೆಯನ್ನು ಹುಸಿಮಾಡದೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಯ್ಯವ್ಯಯದಲ್ಲಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಘೋಷಿಸಿ ಅನುದಾನ ಕಾಯ್ದಿರಿಸಿ ಜಿಲ್ಲೆಯ ಜನರ ಬಹುದಿನದ ಕನಸು ನನಸುಮಾಡುತ್ತಾರೆ ಕಾಯ್ದು ನೋಡಬೇಕಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 