ವಿಜಯಪುರ ಕರ್ನಾಟಕದ ಸಾಂಸ್ಕೃತಿಕ ನಗರವಾಗಿದೆ : ಡಾ. ಕುಶಾಲ ಬರಗೂರು
Vijayapura is the cultural city of Karnataka: Dr. Kushal Baraguru
ಲೋಕದರ್ಶನ ವರದಿ
ವಿಜಯಪುರ 03 : ಕಾವ್ಯಕ್ಕೆ ಸಂಗೀತ ಮತ್ತು ದೃಶ್ಯದ ಸ್ಪರ್ಶ ನೀಡಿದರೆ ಜನಮನ ತಲುಪುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಡಾ. ಕುಶಾಲ ಬರಗೂರು ಹೇಳಿದರು. ಅವರು ನಗರದ ಗಾನಬನದ ಶ್ರೀಗುರು ಕುಮಾರೇಶ್ವರ ಸಂಗೀತ ಮಹಾವಿದ್ಯಾಲಯದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಹಾಗೂ ಸಿದ್ಧರಾಮೇಶ್ವರ ಟೆಲಿಫಿಲಂ ಆಶ್ರಯದಲ್ಲಿ ಹಮ್ಮಿಕೊಂಡ ಸೋಮು ಹಿಪ್ಪರಗಿ ಅವರ ‘ವಿಜಯಪುರ’ ಕನ್ನಡ ಅಲ್ಬಮ್ ಸಾಂಗ್ ಲೋಕಾರೆ್ಣ ಹಾಗೂ ವರ್ತಮಾನ ಕಾವ್ಯ ಸಿಂಚನ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಹಿತ್ಯದ ಓದು ವ್ಯಕ್ತಿಯ ಚಿಂತನೆಯ ಹರಿವನ್ನು ಹೆಚ್ಚಿಸುವುದರ ಜೊತೆಗೆ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ದಿವ್ಯ ಶಕ್ತಿಯಾಗಿದೆ. ಕವಿತೆ ಗಟ್ಟಿಗೊಳ್ಳಲು ಅಧ್ಯಯನ ಅಗತ್ಯವಾಗಿದೆ. ಕವಿ ಸೋಮು ಅವರ ವಿಜಯಪುರ ಸಾಂಸ್ಕೃತಿಕ ಪರಂಪರೆ ಸಾರುವ ಸಾಹಿತ್ಯವನ್ನು ದೃಶ್ಯಗಳಲ್ಲಿ ಸೆರೆ ಹಿಡಿದಿರುವ ನಿರ್ದೇಶಕ ಸುನೀಲಕುಮಾರ ಸುಧಾಕರ ಅವರ ಕ್ರಿಯಾಶೀಲತೆಗೆ ವಿಜಯಪುರ ಅಲ್ಬಮ್ ಸಾಂಗ್ ಹಿಡಿದ ಕೈಗನ್ನಡಿಯಾಗಿದೆ ಆ ಮೂಲಕ ವಿಜಯಪುರ ಕರ್ನಾಟಕದ ಸಾಂಸ್ಕೃತಿಕ ನಗರವಾಗಿದೆ ಎಂದರು.
ಅಲ್ಬಮ್ ಸಾಂಗ ಬಿಡುಗಡೆಗೊಳಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ದಾಕ್ಷಾಯಣಿ ಹುಡೇದ ಮಾತನಾಡಿ, ಇತಿಹಾಸ ಎಲ್ಲರನ್ನು ಕರೆದುಕೊಂಡು ಹೋಗುವ ಸಂದೇಶಗಳನ್ನು ಹೇಳುತ್ತದೆ. ಸಾಮರಸ್ಯದ ನೆಲೆಗಳನ್ನು ಹುಡುಕುತ್ತಾ ಹೋಗುವ ಸಂದರ್ಭದಲ್ಲಿ ಪರಸ್ಪರ ಒಬ್ಬರನ್ನೊಬ್ಬರು ಬೆಸೆಯುವ ಅಲ್ಬಮ್ ಸಾಂಗ್ ಬಿಡುಗಡೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾದುದು ಎಂದರು.
ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಸಂಶೋಧಕ ಲಾಯಪ್ಪ ಇಂಗಳೆ ಮಾತನಾಡಿ, ವಿಜಯಪುರದಲ್ಲಿ ಎರಡು ಗುಮ್ಮಟಗಳಿವೆ. ಒಂದು ಭೌತಿಕ ಗೋಳ ಗುಮ್ಮಟ ಇನ್ನೊಂದು ಬೌದ್ಧಿಕ ವಚನ ಗುಮ್ಮಟ, ಭೌತಿಕ ಗುಮ್ಮಟವು ಪ್ರವಾಸಿಗರನ್ನು ತನ್ನತ್ತ ಸೆಳೆದರೆ, ಬೌದ್ಧಿಗ ವಚನ ಗುಮ್ಮಟವು ನಿರಂತರವಾಗಿ ಶರಣರ ಸಂದೇಶಗಳ ಮೂಲಕ ಎಲ್ಲರನ್ನು ಎಚ್ಚರಿಸುತ್ತಿವೆ. ವಿಶ್ವಗುರು ಬಸವಣ್ಣನವರ ವಚನ ಸಂದೇಶಗಳನ್ನು ಮಾನವ ಕುಲಕ್ಕೆ ದಾರೀದೀಪವಾಗಿವೆ. ಜನ ಬಯಸುವ ರೀತಿಯಲ್ಲಿ ನಾವು ಸಾಹಿತ್ಯವನ್ನು ಹೇಳುವ ಪರಿ ಬದಲಿಸಿಕೊಳ್ಳಬೇಕಿದೆ ಜನ ದೃಶ್ಯ ಮಾಧ್ಯಮದತ್ತ ವಾಲುತ್ತಿರುವಾಗ ಸಾಹಿತ್ಯಕ್ಕೆ ಸಂಗೀತ ಮತ್ತು ದೃಶ್ಯದ ಅಳವಡಿಕೆ ಇಂದಿನ ಕಾಲದಲ್ಲಿ ಅಗತ್ಯವಾಗಿದೆ ಆ ನಿಟ್ಟಿನಲ್ಲಿ ಸೋಮು ಮತ್ತು ಅವರ ತಂಡದ ಪ್ರಯತ್ನ ಅಭಿನಂದನಾರ್ಹವಾದುದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯರಾದ ರಾಜೇಶ್ವರಿ ಮೋಪಗಾರ ಮಾತನಾಡಿ, ಚಿತ್ರ ಕಲಾವಿದರು ತಮ್ಮ ಲಲಿತ ಕಲೆಗಳ ಮೂಲಕ ಭಾವನೆಗಳನ್ನು ಕಟ್ಟಿಕೊಟ್ಟರೆ ಕವಿ ಸಾಹಿತ್ಯದ ಮೂಲಕ ಭಾವನೆಗಳನ್ನು ಅಭಿವ್ಯಕ್ತಗೊಳಿಸುತ್ತಾನೆ. ಚಲನಚಿತ್ರ ನಿರ್ದೇಶಕ ಭಾವನೆಗಳಿಗೆ ಜೀವ ತುಂಬುವ ಕೆಲಸ ಮಾಡುತ್ತಾನೆ. ಪ್ರಸ್ತುತ ಸಂದರ್ಭದಲ್ಲಿ ವಿಜಯಪುರ ಕನ್ನಡ ಅಲ್ಬಮ್ ಸಾಂಗ್ ಉದಾಹರಣೆಯಾಗಿದೆ ಎಂದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 