ವಿಜಯಪುರ 38 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಂಭವ
Vijayapura likely to record temperatures above 38 degrees Celsius
ವಿಜಯಪುರ 13 : ಜಿಲ್ಲೆಯಲ್ಲಿ ಬಿಸಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈಗಾಗಲೇ 36 ರಿಂದ 38 ಡಿಗ್ರಿ ಸೆಲ್ಸಿಯಸ್ ತಲುಪಿದೆ ಪ್ರತಿವರ್ಷಕ್ಕಿಂತ ಈ ವರ್ಷ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿರುವುದರಿಂದ ಬಿಸಿಲಿನ ಝಳಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಕಚೇರಿಗೆ ಹೊಗಿ ಕಾರ್ಯನಿರ್ವಹಿಸಲು ಸರ್ಕಾರಿ ನೌಕರ ಸಿಬ್ಬಂದಿಗಳಿಗೆ ಹಾಗೂ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಇದರಿಂದ ಸರ್ಕಾರಿ ನೌಕರರಿಗೆ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವವಿರುವ ಕಾರಣ ನೌಕರರ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಎಲ್ಲಾ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳ ಕರ್ತವ್ಯದ ಅವಧಿಯನ್ನು ದಿನಾಂಕ1/4/2026 ರಿಂದ 31/5/2026 ರ ವರೆಗೆ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1.30 ರವರೆಗೆ ಬದಲಾಯಿಸಿ ನೌಕರರಿಗೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳಾದ ಕೆ,ಆನಂದ್ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸುರೇಶ ಶೇಡಶ್ಯಾಳ ಖಜಾಂಚಿ ಜುಬೇರ್ ಕೆರೂರ್ ರಾಜ್ಯ ಉಪಾಧ್ಯಕ್ಷರಾದ ವಿಜಯಕುಮಾರ ಹತ್ತಿ ಜಿಲ್ಲಾ ಕಾರ್ಯದರ್ಶಿ ಶಿವರಾಜ್ ಬಿರಾದಾರ್ ಸಿದ್ದು ಹಂಚಿನಾಳ ನಿಜು ಮೇಲಿನಕೇರಿ ನಿರ್ದೇಶಕರಾದ, ರಾಮನಗೌಡ ಪಾಟೀಲ್ ಎಸ್ ಎಸ್ ಮಗ್ಗದ ವಿಜಯಕುಮಾರ್ ಗುಮಶೆಟ್ಟಿ,ಖಾಸಿಂಸಾಬ್ ಮಸಳಿ, ತಾಂಡುರ್ ಮೇತ್ರಿ, ಬಸವರಾಜ ರಾವುರ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 