ಬಳ್ಳಾರಿ ಚಲೋ ಪಾದಯಾತ್ರೆ ಸಮಾರೋಪಕ್ಕೆ ಬೃಹತ್ ಜನಸಂಖ್ಯೆ ಸೇರಿಸಿ: ವಿಜಯೇಂದ್ರ ಮನವಿ

ಬಳ್ಳಾರಿ ಚಲೋ ಪಾದಯಾತ್ರೆ ಸಮಾರೋಪಕ್ಕೆ ಬೃಹತ್ ಜನಸಂಖ್ಯೆ ಸೇರಿಸಿ: ವಿಜಯೇಂದ್ರ ಮನವಿ  Vijayendra appeals for a massive turnout at the 'Ballari Chalo' padayatra's concluding event


ಬಳ್ಳಾರಿ, ಸೆ.10 (ಕರ್ನಾಟಕ ವಾರ್ತೆ): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪಾದಯಾತ್ರೆಯ ಸಮಾರೋಪ ಸಮಾರಂಭ ಸೆ.11ರಂದು ಸಂಜೆ 4 ಗಂಟೆಗೆ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.  

ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಎಲ್ಲ ಕಾರ್ಯಕರ್ತರು, ತಾಯಂದಿರು, ಅಣ್ಣ-ತಮ್ಮಂದಿರು ಹಾಗೂ ಅಕ್ಕ-ತಂಗಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ವಿಜಯೇಂದ್ರ ಮನವಿ ಮಾಡಿದರು.  

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಭ್ರಷ್ಟಾಚಾರ ಹಾಗೂ ದಲಿತ, ಬಡವರು, ರೈತರು, ಮಹಿಳೆಯರು ಮತ್ತು ಯುವಜನ ವಿರೋಧಿ ಧೋರಣೆಗಳನ್ನು ಖಂಡಿಸಿ ಬಿಜೆಪಿ ಈ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಉದ್ದೇಶದಿಂದ ನಡೆದ ಪಾದಯಾತ್ರೆ ಸೆ.11ರಂದು ಸಮಾರೋಪಗೊಳ್ಳಲಿದೆ ಎಂದು ಅವರು ತಿಳಿಸಿದರು.  

ಸಂಜೆ 4 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ಕಾರ್ಯಕರ್ತರು ಆಗಮಿಸಬೇಕು. 4.30ಕ್ಕೆ ಬೃಹತ್ ಬಹಿರಂಗ ಸಭೆ ಆರಂಭವಾಗಲಿದ್ದು, ಬಳಿಕ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.