ವಿಜಯಪುರ: ಮತದಾನ ಅಭಿಯಾನ ಜಾಗೃತಿಗೆ ದ್ವಿಚಕ್ರ ವಾಹನ ಚಾಲನೆ
ಲೋಕದರ್ಶನ ವರದಿ
ವಿಜಯಪುರ 11: ವಿಶೇಷ ರೀತಿಯಲ್ಲಿ ವಿನ್ಯಾಸಗೊಳಿಸಿರುವ ದ್ವಿಚಕ್ರ ವಾಹನದ ಮೂಲಕ ರಾಜ್ಯದಾದ್ಯಂತ ಸಂಚರಿಸಿ ಶೇಕಡಾ ನೂರರಷ್ಟು ಮತದಾನಕ್ಕಾಗಿ ಜಾಗೃತಿ ಮೂಡಿಸುತ್ತಿರುವ ಬಸವರಾಜ ಎಸ್.ಕಲ್ಲಸಕ್ಕರಿ ಅವರ ಜಾಗೃತಿ ವಾಹನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅವರು ಇಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ದಿ: 24-02-2019 ರಿಂದ ಬೆಂಗಳೂರಿನಿಂದ ಆರಂಭಗೊಂಡಿರುವ ಈ ಅಭಿಯಾನವು 13ನೇ ಜಿಲ್ಲೆಯಾದ ವಿಜಯಪುರಕ್ಕೆ ಇಂದು ಆಗಮಿಸಿದ ಸಂದರ್ಭದಲ್ಲಿ ಈ ವಾಹನಕ್ಕೆ ಚಾಲನೆ ನೀಡಲಾಗಿದ್ದು, ಮತದಾನದ ಜಾಗೃತಿ ಅಭಿಯಾನ ಹಾಗೂ ಅಖಂಡ ಕನರ್ಾಟಕಕ್ಕಾಗಿ ಅರಿವು ಮೂಡಿಸಲು ಸಂಚರಿಸುತ್ತಿರುವ ವಾಹನಕ್ಕೆ ಇಂದು ಶುಭ ಕೋರಲಾಯಿತು.
ಈ ಅಭಿಯಾನ ರಾಜ್ಯದ ಬಾಕಿ ಉಳಿದಿರುವ ಇನ್ನೂ 17 ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ತಿಂಗಳ ಅಂತ್ಯದವರೆಗೆ ಶೇಕಡಾ ನೂರರಷ್ಟು ಮತದಾನಕ್ಕಾಗಿ ಜಾಗೃತಿ ಮೂಡಿಸಲು ಬಸವರಾಜ ಕಲ್ಲಸಕ್ಕರಿ ದೃಢ ಸಂಕಲ್ಪ ಮಾಡಿದ್ದು, ತಮ್ಮ ಸ್ವಂತ ಖರ್ಚಿನಿಂದ ಖರೀದಿಸಿದ ವಾಹನದೊಂದಿಗೆ ಜಾಗೃತಿ ಮೂಡಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ ಇತರರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 