ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ.
Vikasita Bharat Sankalpa Sabha of Kagwad BJP Mandal
ಅಥಣಿ 24: ವಿಕಸಿತ ಭಾರತದ ಅಮೃತಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷದ ಅಂಗವಾಗಿ ಕಾಗವಾಡ ಬಿಜೆಪಿ ಮಂಡಲದ ವಿಕಸಿತ ಭಾರತ ಸಂಕಲ್ಪ ಸಭೆ ಜರುಗಿತು.
ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಕೆಂಪವಾಡದ ಕೇಂದ್ರ ಕಚೇರಿಯಲ್ಲಿ ಮಾಜಿ ಸಚಿವರು ಹಾಗೂ ಕಾಗವಾಡದ ಮಾಜಿ ಶಾಸಕರಾದ ಶ್ರೀಮಂತ ಪಾಟೀಲ ಅವರ ನೇತೃತ್ವ ಹಾಗೂ ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸತೀಶ್ ಅಪ್ಪಾಜಿಗೋಳ ಮತ್ತು ಮಾಜಿ ಶಾಸಕರು ಹಾಗೂ ಬಿಜೆಪಿ ಚಿಕ್ಕೋಡಿ ವಿಭಾಗದ ಪ್ರಭಾರಿಗಳಾದ ಸಂಜಯ ಪಾಟೀಲ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಕಾಗವಾಡ ಮಂಡಲದ ವತಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆಯು ನೆರವೇರಿತು.
ಭಾರತೀಯ ಜನಸಂಘದ ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷರು, ಮಾಜಿ ಸಚಿವರು, ಜಿಲ್ಲಾ ಪ್ರಭಾರಿಗಳ, ಹಾಗೂ ಎಲ್ಲ ಮುಖಂಡರುಗಳ ಉಪಸ್ಥಿತಿಯಲ್ಲಿ ಬಿಜೆಪಿ ಕಾಗವಾಡ ಮಂಡಲದ ನೂತನ ಅಧ್ಯಕ್ಷರನ್ನಾಗಿ ಸರ್ವನುಮತದಿಂದ ಜುಗೂಳ ಗ್ರಾಮದ ಅರುಣ ಗಣೇಶವಾಡಿ ಅವರನ್ನು ಆಯ್ಕೆ ಮಾಡಿ ಬಿಜೆಪಿ ಪಕ್ಷದ ಧ್ವಜ ಹಸ್ತಾಂತರಿಸಿ, ಅವರಿಗೆ ಕಾಗವಾಡ ಮಂಡಲದ ವತಿಯಿಂದ ಸತ್ಕರಿಸಿ ಅಭಿನಂದಿಸಲಾಯಿತು.
ವಿಕಸಿತ ಭಾರತದ ಅಮೃತಕಾಲ ಸೇವೆ ಸುಶಾಸನ ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ 11 ವರ್ಷಗಳು ಪೂರ್ಣಗೊಂಡ ನಿಮಿತ್ತ ಕೇಂದ್ರ ಸರ್ಕಾರದ ಸಾಧನೆಗಳನ್ನು ಸರ್ವರಿಗೂ ತಲುಪಿಸುವ ಸದುದ್ದೇಶದೊಂದಿಗೆ ನಡೆದ ಕಾರ್ಯಕ್ರಮವನ್ನು ಉದ್ಘಾಟನೆ ಗೊಳಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳದ ಅಮೃತ್ ಕುಲಕರ್ಣಿ ಮಾತನಾಡಿ ವಿಕಸಿತ ಭಾರತದ ಅಭಿಯಾನ ಬಗ್ಗೆ ಮಾಹಿತಿ ಕೊಟ್ಟು ,ಮೋದಿ ಸರ್ಕಾರ 11 ವರ್ಷದಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ಮಾಹಿತಿ ತಿಳಿಸಿ, ವಿಧಾನ ಸಭೆಯ ಪ್ರತಿಯೊಬ್ಬ ಮತದಾರರ ವರೆಗೆ ಈ ಮಾಹಿತಿ ಮುಟ್ಟಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಭಾರಿಗಳು ಹಾಗೂ ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಮಾತನಾಡಿ, ಮೋದಿ ಸರ್ಕಾರ ಮಾಡಿರುವ ಸಾಧನೆ ಬಗ್ಗೆ ಹಾಗೂ ಸಾಂಸ್ಕೃತಿಕ ಭಾರತದ ಬಗ್ಗೆ ಮಾತನಾಡಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆ ಬೆಳೆಸಿ ಪ್ರತಿ ಭೂತದಲ್ಲಿ ಬಿಜೆಪಿ ಗೆಲ್ಲುವಂತಹ ತಯಾರಿ ಮಾಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಮಾಜಿ ಸಚಿವರು ಹಾಗೂ ಕಾಗವಾಡ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀಮಂತ ಪಾಟೀಲ ಮಾತನಾಡಿ ವಿಕಸಿತ ಭಾರತದ ಅಮೃತ ಕಾಲ ಸೇವೆ ಸುಶಾಸನ ಬಡವರ ಕಲ್ಯಾಣದ ಮೋದಿ ಸರ್ಕಾರ 11 ವರ್ಷಗಳಲ್ಲಿ ಮಾಡಿರುವ ಜನಪರ ಯೋಜನೆಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ನಾನು ಈ ಹಿಂದೆ ನಮ್ಮ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡಿದ್ದು, ಈಗಿನ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ನಾನು ನಮ್ಮ ಬಿಜೆಪಿ ಕಾರ್ಯಕರ್ತರ ಬೆನ್ನೆಲುಬಾಗಿರುತ್ತೇನೆ. ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಎಲ್ಲರಿಗೂ ತಲುಪಿಸಿ ಪಕ್ಷ ಸಂಘಟನೆ ಕೆಲಸಕ್ಕೆ ಮುಂದಾಗಿ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ್ ಕುಲಕರ್ಣಿ, ಮುಖಂಡರಾದ ದಾದಾಗೌಡ ಪಾಟೀಲ, ಶಿವಾನಂದ ಪಾಟೀಲ, ನಿಂಗಪ್ಪಾ ಖೋಕಲೆ, ಅಭಯ ಮಾನ್ವಿ, ಮುರಗೆಪ್ಪಾ ಮಗದುಮ, ಪ್ರಮೋದ ಹೊಸೂರೆ, ಅಪ್ಪಾಸಾಬ ಮಳಮಳಸಿ, ಮನೋಜ ಕುಸನಾಳೆ, ಭರತ ಹೊಸೂರೆ, ರಾಕೇಶ ಪಾಟೀಲ, ಕಿರಣ ಯಂದಗೌಡರ, ಅಪ್ಪಣ್ಣಾ ಮುಜಗೋನವರ, ಆರ್ ಎಂ ಪಾಟೀಲ, ಈಶ್ವರ ಕುಂಬಾರೆ, ಸುಧಾಕರ ಭಗತ್, ಅಭಯ ಪಾಟೀಲ, ಉತ್ಕರ್ಷ ಪಾಟೀಲ, ಪ್ರಫುಲ್ ಥೋರುಸೆ, ರಾಕೇಶ ಕಾಂಬಳೆ, ಪ್ರವೀಣ ಕೆಂಪವಾಡೆ ಸೇರಿದಂತೆ ಹಲವು ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ, ಪುರಸಭೆಯ ಸದಸ್ಯರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 