ಡಾಲ್ಮಿಯ ಸಿಮೆಂಟ್ನ ಸಾಮಾಜಿಕ ಕಾರ್ಯಕ್ಕೆ ಗ್ರಾಮ ಮೆಚ್ಚುಗೆ
Village appreciates Dalmia Cement's social work
ಲೋಕದರ್ಶನ ವರದಿ
ಮೂಡಲಗಿ: ಸಿಮೆಂಟ್ ವಲಯದಲ್ಲಿ ಹೆಸರುವಾಸಿಯಾಗಿರುವ ಡಾಲ್ಮಿಯಾ ಸಿಮೆಂಟ್ ಭಾರತ ಲಿ., (ಡಿಸಿಬಿಎಲ್) ಯಾದವಾಡ ಯೂನಿಟ್ ಈ ಭಾಗದ ರೈತರು ಮತ್ತು ಸಾರ್ವಜನಿಕರ ಹಿತಕ್ಕೆ ಅನುಗುಣವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಯಾದವಾಡ ಮತ್ತು ಕುಲಗೋಡದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಒಟ್ಟು 26 ಲಕ್ಷ ರೂಪಾಯಿಗಳನ್ನು ದೇಣಿಗೆಯನ್ನಾಗಿ ನೀಡುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹರ್ಷ ವ್ಯಕ್ತಪಡಿಸಿದರು.
2006-07 ರಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಆರಂಭಗೊಂಡಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಗೆ ಈ ಭಾಗದ ರೈತರು ತಮ್ಮ ಜಮೀನುಗಳನ್ನು ನೀಡಿ ಕಾರ್ಖಾನೆ ನಿರ್ಮಾಣಕ್ಕೆ ಕಾರಣರಾದರು. ಸಾರ್ವಜನಿಕರು ಸಹ ಇದಕ್ಕೆ ಸಹಕಾರವನ್ನು ನೀಡಿದರು. ಕಾರ್ಖಾನೆ ಅಭಿವೃದ್ಧಿ ಜತೆಗೆ ಈ ಭಾಗದಲ್ಲಿ ಹಲವು ಸಾಮಾಜಿಕ ಚಟುವಟಿಕೆಗಳಿಗೆ ಕಾರ್ಖಾನೆಯು ತಮ್ಮದೇ ರೀತಿಯಲ್ಲಿ ಆರ್ಥಿಕವಾಗಿ ನೆರವು ನೀಡುತ್ತ ಬರುತ್ತಿದೆ. ಈ ಹಿಂದೆ 1 ಕೋಟಿ ರೂಪಾಯಿ ಹಣವನ್ನು ಯಾದವಾಡ ರಸ್ತೆ ನಿರ್ಮಾಣಕ್ಕೆ ನೀಡಿದೆ. ಕುಡಿಯುವ ನೀರಿನ ವ್ಯವಸ್ಥೆಗಾಗಿ 25 ಲಕ್ಷ ರೂಪಾಯಿ ಧನ ಸಹಾಯ ಮಾಡಿದೆ. ಯಾದವಾಡ ಸರ್ಕಾರಿ ಆಸ್ಪತ್ತೆಯ ನವೀಕೃತ ಕಟ್ಟಡ ಕಾಮಗಾರಿಗೆ 30 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದೆ. ಈಗ ಯಾದವಾಡ (ಕ್ರಾಸ್) ಸರ್ಕಲ್ ಹತ್ತಿರ ನಿರ್ಮಾಣವಾಗುತ್ತಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂಪಾಯಿ ನೀಡುತ್ತಿದೆ.
ಇದರ ಜತೆಯಲ್ಲಿ ಕುಲಗೋಡ ಗ್ರಾಮದಲ್ಲಿ ಎಲ್ಲ ಹಿರಿಯರು ಒಂದಾಗಿ ಬಸ್ ನಿಲ್ದಾಣದ ಹತ್ತಿರ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಯನ್ನು ನಿರ್ಮಾಣ ಮಾಡುತ್ತಿದ್ದು, ಇದರ ಕಾಮಗಾರಿಗೆ ಕಾರ್ಖಾನೆಯವರು 10 ಲಕ್ಷ ರೂಪಾಯಿ ವೆಚ್ಚವನ್ನು ಭರಿಸುತ್ತಿದ್ದಾರೆ. ಇಂತಹ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ರೈತರಿಗೆ ವರದಾನವಾಗಿ, ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತಿರುವ ಡಾಲ್ಮಿಯಾ ಕಾರ್ಖಾನೆಯ ಕಾರ್ಯವನ್ನು ಪ್ರತಿಯೊಬ್ಬರೂ ಮೆಚ್ಚಲೇಬೇಕು ಎಂದು ತಮ್ಮ ಸಂತಸವನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಯಾದವಾಡದ ಯೂನಿಟ್ ಮುಖ್ಯಸ್ಥ ಪ್ರಭಾತ್ ಕುಮಾರ ಸಿಂಗ್, ಸಾಂಸ್ಥಿಕ ವಿಭಾಗ ಮುಖ್ಯಸ್ಥ ಉಮೇಶ ದೇಸಾಯಿ, ಹಣಕಾಸು ಮತ್ತು ಲೆಕ್ಕ ವಿಭಾಗದ ಮುಖ್ಯಸ್ಥ ಅರಬಿಂದಕುಮಾರ ಸಿಂಗ್, ಮುಖಂಡರಾದ ಪರ್ವತಗೌಡ ಪಾಟೀಲ, ಅಶೋಕ ನಾಯಿಕ, ಪುಟ್ಟಣ್ಣ ಪೂಜೇರಿ, ಗೋವಿಂದ ಕೊಪ್ಪದ, ಬಸನಗೌಡ ಪಾಟೀಲ, ಸುನೀಲ ನ್ಯಾಮಗೌಡ, ಸುಭಾಸ ಒಂಟಗೋಡಿ, ಬಸವರಾಜ ಹಿಡ್ಕಲ್, ಕಾನೂನು ಸಲಹೆಗಾರ ರಮೇಶ ಮಳಲಿ, ವಿವಿಧ ಸಮುದಾಯಗಳ ಪ್ರಮುಖರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 