ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು: ಉಸ್ತುವಾರಿ ಸಚಿವರಿಗೆ ಗ್ರಾಮಸ್ಥರಿಂದ ಸನ್ಮಾನ
Village gets high school grant: Villagers felicitate minister in-charge
ದೇವರಹಿಪ್ಪರಗಿ 21: ತಾಲೂಕಿನ ಕೊಂಡಗೂಳಿ ಗ್ರಾಮದ ಬಹುದಿನಗಳ ಬೇಡಿಕೆಯಾದ ಪ್ರೌಢಶಾಲೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಮಂಜೂರು ಮಾಡಿಸಿದ್ದಕ್ಕೆ ಗ್ರಾಮಸ್ಥರಿಂದ ಸಚಿವರಿಗೆ ಸನ್ಮಾನಿಸಿ, ಗೌರವಿಸಿದರು.
ಇತ್ತೀಚೆಗೆ ಸಚಿವರ ಸ್ವಗೃಹದಲ್ಲಿ ಗ್ರಾಮದ ಪ್ರಮುಖರು ಹಾಗೂ ಗಣ್ಯರು ಭೇಟಿ ಮಾಡಿ ಗ್ರಾಮದ ಬಡ ಮಕ್ಕಳು ಅದರಲ್ಲೂ ಹೆಣ್ಣು ಮಕ್ಕಳು ಪ್ರೌಢಶಾಲೆ ಇಲ್ಲದ ಕಾರಣ ಉನ್ನತ ಅಭ್ಯಾಸಕ್ಕಾಗಿ ಬೇರೆ ಗ್ರಾಮಗಳಿಗೆ ಹೋಗಬೇಕಾದ ಕಾರಣ ಅರ್ಧದಲ್ಲಿ ಶಾಲೆ ಬಿಟ್ಟು ಶಿಕ್ಷಣದಿಂದ ವಂಚಿತರಾಗುತ್ತಿದ್ದರು. ಕೆಲ ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಪ್ರೌಢಶಾಲೆ ಮಂಜೂರು ಆಗದ ಕಾರಣ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರು ಹಾಗೂ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರಿಗೆ ಶಾಲಾ ಮಕ್ಕಳು ಭೇಟಿ ನೀಡಿ ಮನವಿ ಸಲ್ಲಿಸಿ ಒತ್ತಾಯಿಸಲಾಗಿತ್ತು. ಅದರಂತೆ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡಿಸಿದ್ದಕ್ಕಾಗಿ ಗ್ರಾಮದ ಪ್ರಮುಖರಾದ ಕಾಶೀಲಿಂಗ ಸಿಂದಗೀರಿ ಹಾಗೂ ಬಾಬು ನದಾಫ್ ಅವರು ನೇತೃತ್ವದಲ್ಲಿ ಉಸ್ತುವಾರಿ ಸಚಿವರಿಗೆ ಸನ್ಮಾನಿಸಿ, ಗೌರವಿಸಲಾಯಿತು. ನಂತರ ಮಾತನಾಡಿದ ಅವರು ಈ ಭಾಗದ ಮಕ್ಕಳಿಗೆ ಕಲಿಯಲು ಸಚಿವರು ಪ್ರೌಢಶಾಲೆ ಮಂಜೂರು ಮಾಡಿರುತ್ತಾರೆ. ಇದರಿಂದ ಸುತ್ತ ಮುತ್ತಲಿನ ಗ್ರಾಮಗಳ ಬಡ ಮಕ್ಕಳಿಗೆ ಪ್ರೌಢಶಾಲೆ ಮಂಜೂರು ಆದಕಾರಣ ಅನುಕೂಲವಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಶಿವು ಬಸವಪಟ್ಟಣ, ರಾಜು ಕಂಠಿ, ಶಿವು ಕೊಳ್ಳಾರಿ, ಸಂಗಮೇಶ ದಂಡೋತಿ,ಮೈಬು ಖಾಜಿ, ತಿಪ್ಪಣ್ಣ ಕಂಡಕ್ಟರ್ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 