ಕೆಪಿಎಸ್ ಶಾಲೆಗೆ ಮಕ್ಕಳನ್ನು ಕಳುಹಿಸಲು ವಿರೋಧಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಮತ್ತು ಸಂಘಟನೆಗಳು ಪ್ರತಿಭಟನೆ
Villagers, students and organizations protest against sending children to KPS school
ಲೋಕದರ್ಶನ ವರದಿ
ಕಂಪ್ಲಿ 25: ಎಐಡಿಎಸ್ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ, ಶಾಲೆ ಮುಂದೆ ನಮ್ಮೂರ ಶಾಲೆ ನಮ್ಮಯ ಕಣ್ಮಣಿ ಎಂಬ ಬ್ಯಾನರ್ ಕಟ್ಟಿ ನಮ್ಮೂರ ಶಾಲೆ ನಮ್ಮೂರಲ್ಲಿ ಉಳಿಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಿದರು.ಹೋರಾಟವನ್ನು ಉದ್ದೇಶಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, ಇಡೀ ರಾಜ್ಯಾದ್ಯಂತ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ವಿರುದ್ಧ ಹೋರಾಟ ನಡೆಸುತ್ತಾ ಬಂದಿದ್ದಾರೆ.
ಆದರೆ ಜನರ ತೀವ್ರ ವಿರೋಧದ ನಡುವೆಯೊ ರಾಜ್ಯ ಸರ್ಕಾರವು ತನ್ನ ಹಠಮಾರಿ ಧೋರಣೆ ಬಿಡದೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದು ಅತ್ಯಂತ ಖಂಡನೀಯ!,. ಇದರಿಂದಾಗಿ ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಗಳನ್ನು ಮುಚ್ಚಿ, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದ್ದಾರೆ.. ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಅನ್ನುವುದು ಬರೀ ಬಣ್ಣ ಬಣ್ಣದ ಮಾತುಗಳಿಂದ ಕೂಡಿದ್ದು, ರೈತರ, ಕೂಲಿ ಕಾರ್ಮಿಕರ, ಬಡ ಮಧ್ಯಮ ವರ್ಗದ ಮಕ್ಕಳು 4-5ಕಿ.ಮೀ ದೂರ ಹೋಗಿ ಶಿಕ್ಷಣ ಪಡೆಯಲು ಹೇಗೆ ಸಾಧ್ಯ? ಹಳ್ಳಿಯಿಂದ ಹಳ್ಳಿಗೆ ಹೋಗಲು ಎಷ್ಟೋ ಕಡೆ ಸರಿಯಾದ ರಸ್ತೆ, ಬಸ್ ಸಂಪರ್ಕ ಇರುವುದಿಲ್ಲ,
ಬೇರೆ ಬೇರೆ ಹಳ್ಳಿಗಳಿಗೆ ಹೋಗುವ ಸಂದರ್ಭದಲ್ಲಿ ಕಾಡು, ಮುಳ್ಳು ರಸ್ತೆಯಿಂದ ಸಣ್ಣ ಸಣ್ಣ ಮಕ್ಕಳು ಹೋಗಿ ಓದುವುದು ರೈತರ ಮಕ್ಕಳಿಗೆ ಅಸಾಧ್ಯ.? ಆದ್ದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಹಿತಾಸಕ್ತಿಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.ಈ ದೇಶದ ಶಿಕ್ಷಣಕ್ಕಾಗಿ ಹೋರಾಡಿದ ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ ಅವರು 200 ವರ್ಷಗಳ ಹಿಂದೆ ಮಹಿಳೆಯರು, ಶೋಷಿತರ ಮಕ್ಕಳಿಗೆ ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಹೋರಾಟ ಮಾಡಿ ಶಿಕ್ಷಣ ಎಲ್ಲರಿಗೂ ಸಿಗೋತರ ಧ್ವನಿ ಎತ್ತಿದ್ದಾರೆ. ಅವರ ಹೋರಾಟದ ಸ್ಪೂರ್ತಿ ಇಂದು ನಾವು ಒಗ್ಗಟ್ಟಾಗಿ ಶಾಲೆ ಉಳಿಸಲು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಎಐಕೆ ಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷರು ಗೋವಿಂದ,ಊರಿನ ಗ್ರಾಮಸ್ಥರಾದ , ತಿಪ್ಪೇಸ್ವಾಮಿ, ಕರಿಯಪ್ಪ, ಮಲ್ಲಿ, ಸಿದ್ದು, ಪೋಷಕರು ಭಾಗವಹಿಸಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 