ಐರಣಿ ಗ್ರಾಮದ ಸ್ಮಶಾನ ಭೂಮಿ ಅತಿಕ್ರಮಣ ತೆರವಿಗೆ ಗ್ರಾಮಸ್ಥರ ಆಗ್ರಹ
Villagers demand removal of encroachment on Airani village cremation ground
ರಾಣೆಬೆನ್ನೂರು 22: ತಾಲೂಕಿನ ಐರಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸ್ಮಶಾನ ಭೂಮಿಯನ್ನು ತಕ್ಷಣವೇ ಹದ್ದುಬಸ್ತು ಮಾಡಿ ಅತಿಕ್ರಮಣ ತೆರವುಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಗ್ರೇಡ್-2 ತಹಶೀಲ್ದಾರ್ ಅರುಣ ಕಾರಗಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಚಂದ್ರ್ಪ ಬಣಕಾರ, ಗ್ರಾಮದಲ್ಲಿರುವ ಸ್ಮಶಾನ ಭೂಮಿಗೆ ಸಮರ್ಕ ಹದ್ದುಬಸ್ತು ಇಲ್ಲದ ಕಾರಣ ಅತಿಕ್ರಮಣ ಹೆಚ್ಚಾಗಿದ್ದು, ಗ್ರಾಮಸ್ಥರು ನಿತ್ಯವೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈ ಕುರಿತು ಗ್ರಾಮಸ್ಥರು, ಕರವೇ ಹಾಗೂ ಇತರೆ ಸಂಘಟನೆಗಳು ಹಲವು ಬಾರಿ ತಾಲೂಕು ಆಡಳಿತ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಾಲೂಕು ಆಡಳಿತ ಗ್ರಾಮಸ್ಥರ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸ್ಮಶಾನ ಭೂಮಿಯ ಅತಿಕ್ರಮಣ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಯಾವುದೇ ಮರಣ ಸಂಭವಿಸಿದರೆ ತಹಶೀಲ್ದಾರ್ ಕಚೇರಿ ಎದುರು ಮೃತದೇಹವಿಟ್ಟು ಪ್ರತಿಭಟನೆ ನಡೆಸುವ ಅನಿವಾರ್ಯತೆ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಶ್ರೀ ಮಾಯಮ್ಮ ದೇವಿ ಕಟ್ಟಡ ನಿರ್ಮಾಣ ಸಂಘದ ಜಿಲ್ಲಾ ಅಧ್ಯಕ್ಷ ಮರಣಪ್ಪ ಚಳಗೇರಿ ಮಾತನಾಡಿ, ಸುಮಾರು 8 ಸಾವಿರ ಜನಸಂಖ್ಯೆ ಹೊಂದಿರುವ ಐರಣಿ ಗ್ರಾಮಕ್ಕೆ ಸ್ಮಶಾನಕ್ಕಾಗಿ ಆರ್.ಎಸ್. ನಂ. 365 (1 ಎಕರೆ 2 ಗುಂಟೆ), 366/ಬಿ (2 ಎಕರೆ 3 ಗುಂಟೆ), 378 (4 ಎಕರೆ 4 ಗುಂಟೆ) ಹಾಗೂ 377 (5 ಎಕರೆ) ಸೇರಿ ಒಟ್ಟು ಸುಮಾರು 8 ಎಕರೆ ಪ್ರದೇಶ ದಾಖಲಾಗಿದ್ದರೂ, ಅತಿಕ್ರಮಣದಿಂದ ಅಂತ್ಯಸಂಸ್ಕಾರಕ್ಕೆ ಸ್ಥಳದ ಕೊರತೆ ಉಂಟಾಗಿದೆ ಎಂದು ತಿಳಿಸಿದರು. ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಿಳ್ಳೆಪ್ಪ ಸತ್ಯಪ್ಪನವರ, ಸಹಕಾರಿ ಸಂಘದ ಮಾಜಿ ಅಧ್ಯಕ್ಷ ರಮೇಶ್ ಕಟನಳ್ಳಿ, ಗ್ರಾಮದ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 