ಮುಂಡಗೋಡ 29: ಲೊಲೋಲಾ ಅನುದಾನಿತ ಪ್ರೌಢ ಶಾಲೆ ಶಿಕ್ಷಕ ಹಾಗೂ ರಂಗಭೂಮಿ ಕಲಾವಿದ ವಿನಾಯಕ ಶೇಟ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್2025ನೇ ಸಾಲಿನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ಕರ್ನಾಟಕ ಮೀಡಿಯಾ ಕ್ರಿಯೇಶನ್ಸ್, ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸರಿಗಮ ಲಹರಿ ರಸಮಂಜರಿ ಕಾರ್ಯಕ್ರಮ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಂಗಭೂಮಿ ಕಲಾವಿದ ವಿನಾಯಕ ಶೇಟ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.