ವಿನಾಯಕ ಶೇಟ್ಗೆ ರಾಜ್ಯಮಟ್ಟದ ಬಸವ ಭೂಷಣ ಪ್ರಶಸ್ತಿ
Vinayak Shet receives state-level Basava Bhushan award
ಮುಂಡಗೋಡ 30 : ತಾಲೂಕಿನ ಶಿಕ್ಷಕ, ಸಾಹಿತಿ ಹಾಗೂ ಕಲಾವಿದ ವಿನಾಯಕ ಶೇಟ್ ಅವರಿಗೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದ ರಾಜ್ಯಮಟ್ಟದ ಲೇಖಕರ ಮಹಾಸಮ್ಮೇಳನದಲ್ಲಿ ಪ್ರತಿಷ್ಠಿತ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ರಾಜ್ಯ ನಾಟಕ ಬರಹಗಾರರ ಸಂಘದ ವತಿಯಿಂದ ಗಾನಯೋಗಿ ಪಂಚಾಕ್ಷರಿ ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಭೀಮನಗೌಡ ಬಿ. ಪಾಟೀಲ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಡಾ. ಆರ್. ಪೂಜಾರ್, ರಾಜ್ಯಾಧ್ಯಕ್ಷ ಶಂಕರ ಹಿಪ್ಪರಗಿ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಅಲಗೋಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 