ಶಾಸಕ ಶಿಷ್ಟಾಚಾರ ಉಲ್ಲಂಘನೆ : ಭಾಜಪ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆಗೆ ಕರೆ
Violation of MLA etiquette: BJP workers call for peaceful protest
ಶಿಗ್ಗಾವಿ 29 : ಸವಣೂರಿನ ಕಳಲಕೊಂಡ ಗ್ರಾಮದಲ್ಲಿ ಶನಿವಾರ 886 ಲಕ್ಷಗಳ ವೆಚ್ಚದ ಸ್ವಚ್ಛ ಭಾರತ ಯೋಜನೆಯಡಿಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿಗೆ ಶಾಸಕ ಯಾಸೀರಖಾನ್ ಪಠಾಣ ಅವರಿಂದ ಭೂಮಿ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಶಾಸಕರ ಕಾರ್ಯಕ್ರಮವನ್ನು ಸ್ಥಳಿಯ ಬಿಜೆಪಿ ಮುಖಂಡರು ವಿರೋಧಿಸಿ ಪ್ರತಿಭಟನೆಯನ್ನು ನಡೆಸಿದರು.
ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಸಂಸದ ಪ್ರಹ್ಲಾದ ಜೋಶಿ ಯವರನ್ನು ಆಹ್ವಾನಿಸದೆ ಕಾರ್ಯಕ್ರಮ ಮಾಡುತ್ತಿರುವುದು ಶಿಷ್ಟಾಚಾರ ಉಲ್ಲಂಘನೆ ಎಂದು ಭಾಜಪಾ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯನ್ನು ಸಹಿಸದ ಶಾಸಕ ಯಾಸೀರಖಾನ್ ಪಠಾಣ ಅವರು ಪೊಲೀಸರನ್ನು ಹಾಗೂ ಅಧಿಕಾರಿಗಳನ್ನು ಬಳಸಿಕೊಂಡು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರನ್ನು ಏಕಾಏಕಿ ಬಂಧಿಸಿ ಶಿಗ್ಗಾವಿ ಪಟ್ಟಣದ ಪೊಲೀಸ್ ಠಾಣೆಗೆ ಕರೆ ತಂದಿರುವುದು ಅಧಿಕಾರದ ದುರ್ಬಳಕೆಯಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಶಿಗ್ಗಾವಿ ಪೋಲಿಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 