ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ

Virat Kohli and wife Anushka visits Vrindavan

ಮುಂಬೈ 13: ಟೆಸ್ಟ್ ಕ್ರಿಕೆಟ್‌ನಿಂದ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ವೃಂದಾವನಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಶ್ರೀಕೃಷ್ಣತನ್ನ ಬಾಲ್ಯವನ್ನು ಕಳೆದ ಪವಿತ್ರ ಸ್ಥಳ ವೃಂದಾವನದಲ್ಲಿ ವಿರಾಟ್ ಮತ್ತು ಅನುಷ್ಕಾ ಸಂತ ಪ್ರೇಮಾನಂದ ಗೋವಿಂದ ಶರಣ್ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.