ಧೋನಿ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ
ನಾರ್ಥ ಸೌಂಡ್, ಆ 26 ಕ್ರಿಕೆಟ್ ಪುಟಗಳಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ 318 ರನ್ ಗಳಿಂದ ದಾಖಲೆಯ ಜಯ ಸಾಧಿಸುತ್ತಿದ್ದಂತೆ ವಿರಾಟ್ ಮತ್ತೊಂದು ಮೈಲಿಗಲ್ಲು ಸೃಷ್ಠಿಸಿದ್ದಾರೆ.
ವಿರಾಟ್ ಕೊಹ್ಲಿ ಅವರು ತಮ್ಮ ನಾಯಕತ್ವದಲ್ಲಿ 27 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಮಾಜಿ ನಾಯಕ ಮಹೇಂದ್ರ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಸಾಧನೆ ಮಾಡಲು ಕೊಹ್ಲಿ ಒಟ್ಟು 47 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ. ಧೋನಿ 60 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ.
ಧೋನಿ ತಮ್ಮ ನಾಯಕತ್ವದಲ್ಲಿ ಶೇ. 45 ರಷ್ಟರ ಪ್ರಮಾಣದಲ್ಲಿ ಯಶಸ್ಸು ಕಂಡಿದ್ದಾರೆ. ಒಟ್ಟು 60 ಪಂದ್ಯಗಳಲ್ಲಿ 27 ರಲ್ಲಿ ಜಯ, 18ರಲ್ಲಿ ಸೋಲು ಮತ್ತು 15 ಡ್ರಾ ಆಗಿವೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 55.31 ಸರಾಸರಿಯಲ್ಲಿ ಯಶ ಕಂಡಿದೆ. ಒಟ್ಟು 47 ಪಂದ್ಯಗಳಲ್ಲಿ 27 ಜಯ, 10 ಸೋಲು ಮತ್ತು 10 ರಲ್ಲಿ ಡ್ರಾ ಆಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 