ವಿರೂಪಾಕ್ಷ ಮಾಮನಿ ಅವರ ಹುಟ್ಟುಹಬ್ಬ ಸಂಭ್ರಮ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
Virupaksha Mamani's birthday celebration and social work praised
ಸವದತ್ತಿ 24 : ನಗರದ ಎಪಿಎಂಸಿ ಆವರಣದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷ ಮಾಮನಿ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಆಚರಿಸಿದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಪಕ್ಷದ ಮುಖಂಡ ಸೌರವ ಚೋಪ್ರಾ, ವಿರೂಪಾಕ್ಷ ಮಾಮನಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ, ಅವರ ಕುಟುಂಬದ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿವೆ. ಮುಂದಿನ 2028ರ ಚುನಾವಣೆಯಲ್ಲಿ ಅವರು ಶಾಸಕರಾಗಿ ಆಯ್ಕೆಯಾಗಲಿ ಎಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕಾರ್ಯಕರ್ತರು ವಿರೂಪಾಕ್ಷ ಮಾಮನಿ ಅವರಿಗೆ ಹೂಗುಚ್ಛಗಳನ್ನು ನೀಡಿ, ಆತ್ಮೀಯವಾಗಿ ಶುಭಾಶಯ ಕೋರಿದರು. ಕಾರ್ಯಕರ್ತರ ಪ್ರೀತಿ ಮತ್ತು ಅಭಿಮಾನವನ್ನು ಸ್ವೀಕರಿಸಿದ ವಿರೂಪಾಕ್ಷ ಮಾಮನಿ ಅವರು ಮಾತನಾಡಿ, ನನ್ನ ಹುಟ್ಟುಹಬ್ಬದ ದಿನದಂದು ಕಾರ್ಯಕರ್ತರು ಮತ್ತು ಸಾರ್ವಜನಿಕರೊಂದಿಗೆ ಕಾಲ ಕಳೆಯುತ್ತಿರುವುದು ಸಂತಸ ತಂದಿದೆ. ಜನರ ಈ ಪ್ರೀತಿ, ವಿಶ್ವಾಸವೇ ನನಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ಹೆಚ್ಚಿನ ಪ್ರೇರಣೆ ನೀಡುತ್ತದೆ ಎಂದು ಧನ್ಯವಾದ ಅರ್ಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ವಲಯದ ಗಣ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶುಭ ಹಾರೈಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 