ಗಾಯನದಲ್ಲಿ ವಿಶಾಲ ಪ್ರಥಮ
ಮಹಾಲಿಂಗಪುರ 07: ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಪಪೂ ಕಾಲೇಜು ಮತ್ತು ಪ್ರೌಢ ಶಾಲೆಯ ಸಹಯೋಗದಲ್ಲಿ ಡಿ.6 ರಂದು ಜರುಗಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಮತ್ತು ವಾಣಿಜ್ಯ ಸಂಭ್ರಮ ಕಾರ್ಯಕ್ರಮದ ಗಾಯನ ಸ್ಪರ್ಧೆಯಲ್ಲಿ ಸ್ಥಳೀಯ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಶಾಲ ಶಂಕರ ಮುರಗೋಡ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದು, ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ತಿಪ್ಪಾ, ಮುಖ್ಯೋಪಾಧ್ಯಾಯ ಶಂಕರ ಕೌಜಲಗಿ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.