ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ .ಡಿ ಮೌನೇಶ

ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ  .ಡಿ ಮೌನೇಶ Vishwakarma's contribution to the fields of art and architecture is immense. — D. Mounesha

ಲೋಕದರ್ಶನ ವರದಿ 

             ಕಂಪ್ಲಿ 17: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿಯನ್ನು ಸಂಭ್ರಮ ಸಡಗರದಿಂದ ಗುರುವಾರದಂದು ಆಚರಿಸಲಾಯಿತು. ತಹಶೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ. ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ.ಎಂದರು  ವಿಶ್ವಕರ್ಮ ಸಮಾಜದ ಪ್ರಧಾನ ಕಾರ್ಯದರ್ಶಿ ಡಿ.ಮೌನೇಶ್ ಮಾತನಾಡಿ, ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’

ಸರ್ಕಾರದಿಂದ ವಿಶ್ವಕರ್ಮ ಸಮುದಾಯಕ್ಕೆ ಸಹಾಯಧನ ಮತ್ತು ಮೂಲ ಭೂತ ಸೌಲಭ್ಯ ಒದಗಿಸಬೇಕೆಂದರು ಶೀಘ್ರದಲ್ಲಿ ಕಲ್ಯಾಣ ಮಂಟಪ ಉದ್ಘಾಟನೆಯಾಗಲಿದೆ ಶಾಸಕರು ಆಗಮಿಸುತ್ತಾರೆ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವಕರ್ಮ ಜಯಂತ್ಯೋತ್ಸವವನ್ನು ಸಂಭ್ರಮದ ಜೊತೆಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಲ್ಲಿನ ಕಾಳಿಕಾಕಮಠೇಶ್ವರ ದೇವಸ್ಥಾನದಲ್ಲಿ ಮತ್ತು ಪಟ್ಟಣದ ಜಕಣಾಚಾರರ್ಯ ವೃತ್ತದಲ್ಲಿ ಮತ್ತು ಪುರಸಭೆ ಕಚೇರಿಯಲ್ಲಿ ಜಯಂತಿ ಆಚರಿಸಲಾಯಿತು ಎಂದರು. ಈ ಸಂದರ್ಭದಲ್ಲಿ  ಇಸಿಒ ರೇವಣ್ಣ, ವಿಶ್ವಕರ್ಮ ಸಮಾಜದ ಅಧ್ಯಕ್ಷ ರುದ್ರ​‍್ಪ ಆಚಾರ್,  ಮಹಿಳಾ ಸಂಘದ ಅಧ್ಯಕ್ಷೆ ಡಿ.ವೀಣ, ಪ್ರಧಾನ ಕಾರ್ಯದರ್ಶಿ ಸವಿತಾ, ಮುಖಂಡರಾದ ರಾಮಚಂದ್ರ ಆಚಾರ್, ಡಿ.ಕಾಳಾಚಾರ್, ಡಿ.ರಾಘವೇಂದ್ರ, ಕೆ.ರಾಘವೇಂದ್ರ, ಅಳ್ಳಳ್ಳಿ ಮೌನೇಶ, ವಿಜಯಕುಮಾರ, ಗುರುಮೂರ್ತಿ, ನಾರಾಯಣ ಆಚಾರ್, ಮಂಜುನಾಥ ಆಚಾರ್ ಸೇರಿದಂತೆ ಸಮಾಜದವರು, ಸಿಬ್ಬಂದಿಗಳು ಇದ್ದರು.