ಬೆಳಗಾವಿ, 17: ವಿಶ್ವಕರ್ಮರಂತಹ ಮಹಾನ್ ದಾರ್ಶನಿಕರು ನಡೆದು ಬಂದಿರುವ ದಾರಿ ಮತ್ತು ವಿಚಾರಧಾರೆಗಳನ್ನು ಅರಿತುಕೊಂಡು ಅವುಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ. ಬೂದೆಪ್ಪ ಎಚ್ ಬಿ. ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯಕ್ತಾಶ್ರಯದಲ್ಲಿ ಮಂಗಳವಾರ (ಸೆ. 17) ನಡೆದ 4ನೇ ವರ್ಷದ ವಿಶ್ವಕರ್ಮ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ವರ್ಷ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಪ್ರವಾಹ ಬಂದಿರುವ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಮನೆಗಳು, ಬೆಳೆಗಳು ಮತ್ತು ಜಾನುವಾರುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದ್ದರಿಂದ ಸಕರ್ಾರ ಹಾಗೂ ಸಮಾಜದ ಜನರ ಆಶಯದಂತೆ ಸರಳ ರೀತಿಯಲ್ಲಿ ಜಯಂತಿಯನ್ನು ಆಚರಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜದಲ್ಲಿ ಯಾವುದೇ ಸಂಕಷ್ಟಗಳು ಎದುರಾದರೂ ಅವುಗಳನ್ನು ಎದುರಿಸಿ ಎಲ್ಲರೂ ಒಗ್ಗಟ್ಟಾಗಿ ಬದುಕುವುದಕ್ಕೆ ಇಂತಹ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಗಳನ್ನು ತಿಳಿದುಕೊಳ್ಳಬೇಕು ಎಂದು ಡಾ.ಬೂದೆಪ್ಪ ಹೇಳಿದರು.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿದರ್ೇಶಕರಾದ ವಿದ್ಯಾವತಿ ಭಜಂತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜದಲ್ಲಿ ದ್ವೇಷ, ವೈಷಮ್ಯ, ಜಾತಿಯತೆ, ದೌರ್ಜನ್ಯಗಳು ಹೋಗಲಾಡಿಸಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಅಂದ ಕಲಾವಿದ ಕುಮಾರ ಬಡಿಗೇರ ಹಾಗೂ ಸಂಗಡಿಗರು ನಾಡಗೀತೆಯನ್ನು ಹಾಡಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಅಭಿವೃಧ್ಧಿ ನಿಗಮದ ಮಾಜಿ ಸದಸ್ಯರು ಕಲ್ಲಪ್ಪ ಬಡಿಗೇರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಜಪ್ಪ ಬಡಿಗೇರ, ಚನ್ನಪ್ಪ ಪತ್ತಾರ, ಪಿ.ಜಿ ಪತ್ತಾರ, ಶಂಕರ ಬಡಿಗೇರ, ರಾಜು ಬಡಿಗೇರ, ಡಾ. ಈರಪ್ಪ ಪತ್ತಾರ, ಪುಂಡಲಿಕ ಹೆಬ್ಬಳ್ಳಿ, ಮಾರುತಿ ಕಂಬಾರ, ಸುರೇಶ್ ಕಂಬಾರ, ಜನಾರ್ದನ ಬಡಿಗೇರ, ವಿಜಯ ಪತ್ತಾರ, ಮನೋಹರ ಬಡಿಗೇರ, ಕೃಷ್ಣಾ ಕಡಕೋಳ, ಗೀತಾ ಸುತಾರ,ಆನಂದ ಪತ್ತಾರ, ಪದ್ಮಶ್ರೀ ಪತ್ತಾರ, ರವಿಶಂಕರ ಪತ್ತಾರ, ವೈಶಾಲಿ ಸುತಾರ, ಅರ್ಚನಾ ಮೇಸ್ತ್ರಿ, ಭರತ ಶಿರೋಡಕರ, ಸಿ.ವಾಯ್ ಪತ್ತಾರ, ಪುಂಡಲೀಕ ಬಡಿಗೇರ, ಸುರೇಶ ಬಡಿಗೇರ, ಎಸ್.ಕೆ ಪತ್ತಾರ, ಎಲ್ ಎನ್ ಸುತಾರ,ಉಮೇಶ್ ಪತ್ತಾರ, ಪ್ರಭಾ ಪತ್ತಾರ, ಸಾವಿತ್ರಿ ಕಮ್ಮಾರ, ಮಂಜುಳಾ ಪೋತದಾರ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.