ಮಾತೃ ಪಕ್ಷಕ್ಕೆ ಮತ್ತೆ ಮರಳಲು ಸಿದ್ದರಾಮಯ್ಯಗೆ ವಿಶ್ವನಾಥ್ ಆಹ್ವಾನ


ಬೆಂಗಳೂರು 07: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಯತ್ನದಲ್ಲಿರುವ ವಿಶ್ವನಾಥ್ ಅವರು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.  

ಜೆಡಿಎಸ್ ಕಚೇರಿಯಲ್ಲಿ ಮಾತನಾಡಿರುವ ವಿಶ್ವನಾಥ್ ಅವರು, ಜನತಾ ಪರಿವಾರವನ್ನು ಒಗ್ಗೂಡಿಸಬೇಕಿದೆ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಬೇಕಿದೆ. ಹೀಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕೆಂದು 

ಹೇಳಿದ್ದಾರೆ.  

ಸಿದ್ದರಾಮಯ್ಯ ಅವರು ಬೆಳೆದಿದ್ದು ಜನತಾ ಪರಿವಾರದಲ್ಲಿಯೇ ಆಗಿದೆ. ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಬೆಳೆಸಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮಾಡಿದ್ದೂ ಕೂಡ ಜೆಡಿಎಸ್. ಹೀಗಾಗಿ ಸಿದ್ದರಾಮಯ್ಯ ಅವರು ತಾಯಿ ಪಕ್ಷಕ್ಕೆ ಮತ್ತೆ ಸೇರ್ಪಡೆಗೊಳ್ಳಬೇಕೆಂದು ತಿಳಿಸಿದ್ದಾರೆ.