ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಅಧಿಕಾರಿಗಳಿಂದ ವಿವಿಧ ಗ್ರಾ.ಪಂ.ಗಳಿಗೆ ಭೇಟಿ: ಪರಿಶೀಲನೆ
ಕೊಪ್ಪಳ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉತ್ತಮ ಆಡಳಿತ ಅನುಷ್ಠಾನ ಕುರಿತು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಅಧಿಕಾರಿಗಳು ಕೊಪ್ಪಳ ತಾಲೂಕಿನ ವಿವಿಧ ಪಂಚಾಯತಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳ ಕಡತಗಳು ಮತ್ತು ದಾಖಲಾತಿಗಳ ನಿರ್ವಹಣೆ ಕುರಿತು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಾಂತ್ರಿಕ ಸಮಾಲೋಚಕರಾದ ಸಿ.ಎಸ್. ದೇಶಮುಖ್ ಅವರು ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಕಳೆದ ಎರಡು ವರ್ಷದಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳಿಗೆ ದಾಖಲಾತಿಗಳನ್ನು ಮತ್ತು ಉತ್ತಮ ಆಡಳಿತ ಅನುಷ್ಠಾನ ಅಂಶಗಳಾದ 7 ವಹಿಗಳ ನಿರ್ವಹಣೆ, ಕಾಮಗಾರಿಗಳಿಗೆ ನಾಮಫಲಕ ಅಳವಡಿಕೆ ಪರಿಶೀಲಿಸಿದರು. ಬುಡಶೆಟ್ನಾಳ ಕೆರೆ ಹೂಳೆತ್ತುವ ಕಾಮಗಾರಿ ಅನುಷ್ಠಾನ ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಗ್ರಾ.ಪಂ. ಮತ್ತು ಆರೋಗ್ಯ ಇಲಾಖೆ ವತಿಯಿಂದ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರ ಜರುಗಿಸಿದ ಬಗ್ಗೆ ಮಾಹಿತಿ ಪಡೆದರು. ಬುಡಶೆಟ್ನಾಳ ಕೆರೆ ಹೂಳೆತ್ತುವ ಕಾಮಗಾರಿ, ಚರಂಡಿ ನಿಮರ್ಾಣ, ದನದೊಡ್ಡಿ ನಿಮರ್ಾಣ, ಕೃಷಿಹೊಂಡ ನಿಮರ್ಾಣದ ಕಾಮಗಾರಿಗಳ ಕಡತದಲ್ಲಿರುವ ದಾಖಲಾತಿಗಳನ್ನು ಪರಿಶೀಲಿಸಿ, ಹೂಳೆತ್ತುವ ಕಾಮಗಾರಿಯಲ್ಲಿ ಕೂಲಿಕಾರರಿಗೆ ಕೂಲಿ ಹಣವನ್ನು ನೀಡಿದ ಬಗ್ಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಂತ್ರಿಕ ಸಹಾಯಕರ ಜೊತೆ ಚಚರ್ಿಸಿದರು.
ನಂತರ ಗುಳದಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಅನುಷ್ಠಾನಗೊಂಡ ಬಹುಕಮಾನಿನ ಆರ್ಚ ಚೆಕ್ ಡ್ಯಾಂ ನಿಮರ್ಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು. ನೀರಿನ ಪ್ರಮಾಣ ಸಂಗ್ರಹಣ ಸಾಮಥ್ರ್ಯವನ್ನು ಪರಿಶೀಲಿಸಿ ನಂತರ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರರ ಜೊತೆ ಚಚರ್ಿಸಿ ದಾಖಲಾತಿ ಪರಿಶೀಲಿಸಿದರು. ಬೂದಗುಂಪಾ ಗ್ರಾ.ಪಂ.ಗೆ ಭೇಟಿ ನೀಡಿ, 2017-18 ಮತ್ತು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳ ದಾಖಲಾತಿಗಳನ್ನು ಪರಿಶೀಲಿಸಿದರು. ಸಂಬಂಧಿಸಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಿದರು.
ತಾಲೂಕ ಯೋಜನಾಧಿಕಾರಿ ಶರಣಯ್ಯ ಸಸಿಮಠ, ಜಿ.ಪಂ. ಎಡಿಪಿಸಿ ಮಹಾಂತಸ್ವಾಮಿ, ತಾಂತ್ರಿಕ ಸಂಯೋಜಕ ಸಂತೋಷ ನಂದಾಪುರ, ಐಇಸಿ ಸಂಯೋಜಕ ದೇವರಾಜ ಪತ್ತಾರ, ಎಂ.ಐ.ಎಸ್. ಸಂಯೋಜಕ ಮಂಜುನಾಥ ಸೇರಿದಂತೆ ಜವಳಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಕಿರಿಯ ಅಭಿಯಂತರರು, ತಾಂತ್ರಿಕ ಸಹಾಯಕರು ಹಾಜರಿದ್ದರು ಎಂದು ಕೊಪ್ಪಳ ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಟಿ. ಕೃಷ್ಣಮೂತರ್ಿ ಅವರು ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 