ಸಾಂತ್ವನ ಕೇಂದ್ರಕ್ಕೆ ಕಾನೂನು ವಿದ್ಯಾರ್ಥಿಗಳ ಭೇಟಿ
ಲೋಕದರ್ಶನ ವರದಿ
ಬೆಳಗಾವಿ 10: ಕೆಎಲ್ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಚಿಕ್ಕೋಡಿಯ ವಿದ್ಯಾರ್ಥಿಗಳು ಮಹಿಳಾ ಕಲ್ಯಾಣ ಸಂಸ್ಥೆಯ "ಸಂಗಾತಿ" ಕೌಟುಂಬಿಕ ಸಲಹಾ ಕೇಂದ್ರ ಹಾಗೂ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳಿಗೆ ಭೇಟಿಕೊಟ್ಟು ಕೇಂದ್ರಗಳಲ್ಲಿ ದಾಖಲಾಗುತ್ತಿರುವ ವಿವಿಧ ಪ್ರಕರಣಗಳು ಮತ್ತು ಅವುಗಳಿಗೆ ದೊರಕುತ್ತಿರುವ ಸೇವೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಲಹಾಗಾರರಾದ ಶ್ರೀಮತಿ ಕವಿತಾ ಅಕ್ಕಿ ಮಾತನಾಡಿ ಆಧುನಿಕತೆ, ಪಾಶ್ಚಿಮಾತ್ಯೀಕರಣದ ನೆಪದಲ್ಲಿ ಯುವಜನತೆ ಕೌಟುಂಬಿಕ ಜವಾಬ್ದಾರಿಗಳನ್ನು ಮರೆಯುತ್ತಿದ್ದಾರೆ. ಕುಟುಂಬಗಳಲ್ಲಿ ಅಶಾಂತಿ, ವೈಮನಸ್ಸು ಹೆಚ್ಚಾಗುತ್ತಿದ್ದು, ಕುಟುಂಬಗಳು ವಿಘಟಿತಗೊಳ್ಳುತ್ತಿವೆ ಆದ್ದರಿಂದ ಸಾಂತ್ವನ ಮಹಿಳಾ ಸಹಾಯವಾಣಿ ಮತ್ತು ಸಂಗಾತಿ ಕೌಟುಂಬಿಕ ಸಲಹಾ ಕೇಂದ್ರಗಳ ಮೂಲಕ ಮಹಿಳೆರ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದರು.
ಮಹಿಳಾ ಕಲ್ಯಾಣ ಸಂಸ್ಥೆಯ ಸಂಯೋಜಕರಾದ ಎಂ. ಎಸ್. ಚೌಗಲಾ ಮಾತನಾಡಿ ದೌರ್ಜನ್ಯ, ಶೋಷಣೆ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳಕ್ಕೆ ಒಳಗಾಗಿ ಯಾತನೆ ಪಡುತ್ತಿರುವ ಮಹಿಳೆಯರಿಗೆ 24 ಗಂಟೆಗಳ ತುತರ್ು ದೂರವಾಣಿ ಕರೆಯ ಸೇವಾ ಸೌಲಭ್ಯ ನೀಡಲಾಗುತ್ತಿದೆ. ಕಾನೂನು ವಿದ್ಯಾಥರ್ಿಗಳ ಸಹಾಯ ಸಹ ಕೆಲ ಪ್ರಕರಣಗಳಲ್ಲಿ ಅಗತ್ಯ ಎಂದರು. ಕಾರ್ಯಕ್ರಮದಲ್ಲಿ ಕಾನೂನು ಮಹಾವಿದ್ಯಾಲಯದ ಪ್ರೊ. ಶಿಲ್ಪಾ ರಾಯ್ಕರ್, ಪ್ರೊ. ಪಿ. ಎಸ್. ಕಮತೆ, ಎಂ. ಎಂ. ಗಡಗಲಿ ಉಪಸ್ಥಿತರಿದ್ದರು. ಸಮಾಜಕಾರ್ಯಕತರ್ೆ ಅನ್ನಪೂರ್ಣ ಬುಚಡಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 