ಕಾರವಾರ,ಫೆ.26 :- ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಫೆ.28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11.30 ಕ್ಕೆ ಕ್ರಿಮ್ಸ್ ನಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸುವರು.