ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ: ಭೀಮಾಶಂಕರ ಕನ್ನೂರ
Visit to flood-affected area: Bhimashankar Kannur
ಇಂಡಿ 25: ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬೀಮಾಶಂಕರ ಕನ್ನೂರ ಅವರು ಬೇಟಿ ನೀಡಿದರು.ಭೀಮಾ ನದಿಗೆ ಮಾಹಾರಾಷ್ಟ್ರದ ಉಜ್ಜೆನಿ ವೀರಬಟ್ಕಲ್ ಆಣೆಕಟ್ಟಿನಿಂದ ಹಾಗೂ ಸಿನಾ ನದಿಗಳಿಂದ ಸುಮಾರು ಮೂರು ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಕಾರಣ ಇಂಡಿ ತಾಲ್ಲೂಕಿನ ಕೆಲವು ಹಳ್ಳಿಗಳು ಸಂಪರ್ಕ ಕಳೆದುಕೊಂಡಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ಅವರು ಪ್ರವಾಹ ಪೀಡಿತ ಪ್ರದೇಶವಾದ ಹಿಂಗಣಿ ಹಾಗೂ ಬರಗುಡಿ ಗ್ರಾಮಕ್ಕೆ ಬೇಟಿ ನೀಡಿ ವಸ್ತು ಸ್ಥಿತಿ ವೀಕ್ಷಣೆ ಮಾಡಿದರು.ಪ್ರವಾಹ ಪೀಡಿತ ಜನರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರವಾಹ ಪೀಡಿತ ಜನರನ್ನು ಕಾಳಜಿ ಮನೆಗಳಿಗೆ ಸ್ಥಳಾಂತರಿಸಲು ಸಲಹೆ ಸೂಚನೆ ನೀಡಿದರು.ಹಾಗೂ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.
ಹಿಂಗಣಿ - ಬರಗುಡಿ ಮುಖ್ಯ ರಸ್ತೆಯ ಮೇಲೆ ಭೀಮಾನದಿ ಹಿನ್ನೀರು ಬಂದಿದ್ದರಿಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದನ್ನು ಕಂಡ ಅಧಿಕಾರಿ ಜನರಿಗೆ ಹೊಳೆ ಹಾಗೂ ಒತ್ತು ಕಡೆಗೆ ಹೋಗಬಾರದು ಮತ್ತು ಸುರಕ್ಷಿತವಾಗಿ ಇರಲು ಮನವಿ ಮಾಡಿದರು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನದಿ ತೀರದ ಗ್ರಾಮಗಳಲ್ಲಿ ಜನ, ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಸೂಚನೆ ನೀಡಿದರು ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳಲು ಡಂಗೂರು ಸಾರಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದೇ ರೀತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆಯನ್ನು ನೀಡಿದರು. ಹಾಗೂ ಯಾವುದೇ ರೀತಿಯ ರೋಗ ರುಜಿನಗಳು ಬರದಂತೆ ತಡೆಯಲು ಆರೋಗ್ಯ ಇಲಾಖೆಯೊಂದಿಗೆ ನೀಗಾ ವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.ಹಾಗೂ ಜಾನುವಾರುಗಳಿಗೆ ಮುಂಜಾಗ್ರತಾ ಕ್ರಮವಾಗಿ ಎಸ್ ಎಚ್ ಮತ್ತು ಬಿ ಕ್ಯೂ ರೋಗನಿರೋಧಕ ಲಸಿಕೆಯನ್ನು ಕಡ್ಡಾಯವಾಗಿ ಹಾಕಬೇಕು ಎಂದು ಸೂಚನೆ ನೀಡಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಬರಗುಡಿ ಮತ್ತು ಹಿಂಗಣಿ ಗ್ರಾಮದ ಚುನಾಯಿತ ಸದಸ್ಯರು , ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 