ಶಾಸಕರ ನಿವಾಸಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್ಗಳ ವಿತರಣೆ

ಶಾಸಕರ ನಿವಾಸಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್ಗಳ ವಿತರಣೆ  Visiting the residences of MLAs and distributing enumeration forms

ಹುಬ್ಬಳ್ಳಿ 30: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಹಾಗೂ ಎಫ್‌.ಎಚ್‌. ಜಕ್ಕಪ್ಪನವರ್ ಅವರ ನಿವಾಸಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ (ಗಣತಿ) ಫಾರ್ಮ್ಗಳನ್ನು ವಿತರಿಸಿ ಅಗತ್ಯ ಮಾಹಿತಿ ನೀಡಿದರು.  ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ, ಹುಬ್ಬಳ್ಳಿ ನಗರ ತಹಶೀಲ್ದಾರ್ ಮಹೇಶ್ ಭಗವಂತ ಗಸ್ತೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.