ವಿಶ್ವಮಾನವ ದಿನಾಚರಣೆ: ಕುವೆಂಪು ಅವರಿಗೆ ಭಕ್ತಿ ನಮನ ಸಲ್ಲಿಕೆ

ಕೊಪ್ಪಳ 29: ವಿಶ್ವಮಾನವ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಆಡಿಟೋರಿಯಂ ಹಾಲ್ನಲ್ಲಿ ಇಂದು (ಡಿ.29) ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸಲಾಯಿತು. 

ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಲ್.ಜಿ ರಾಟಿಮನಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ  ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ, ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರ, ಮಹಾಂತೇಶ ಮಲ್ಲನಗೌಡರ, ನಿವೃತ್ತ ವಾರ್ತಾಧಿಕಾರಿ ಬಸವರಾಜ ಆಕಳವಾಡಿ, ನಿವೃತ್ತ ಪ್ರಾಶುಂಪಾಲಕರಾದ ಚಂದ್ರಶೇಖರ ಜಡಿಯವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪೇಜಾವರ ಶ್ರೀಗಳು ವಿಧಿವಶರಾದ ಹಿನ್ನೆಲೆ ಕಾರ್ಯಕ್ರಮದಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು.  ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳ ಮಕ್ಕಳು, ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.