26 ರಂದು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ
Vocational Education Exhibition and Career Fair on the 26th
ಲೋಕದರ್ಶನ ವರದಿ
ಧಾರವಾಡ 25 : 2025-26ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ರಾಜ್ಯದ 34 ಡಯಟ್‌ಗಳಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಇದರ ಭಾಗವಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಮಾರ್ಗದರ್ಶನ ನೀಡಲು ನಗರದ ಶಿಕ್ಷಕಿಯರ ಸರಕಾರಿ ತರಬೇತಿ ಸಂಸ್ಥೆ(ಟಿಸಿಡಬ್ಲ್ಯು) ಇಲ್ಲಿ ದಿನಾಂಕ:26-03-2026ರಂದು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕರಿಯರ್ ಮೇಳವನ್ನು ಆಯೋಜಿಸಲಾಗಿದೆ.
ಸರ್ಕಾರದ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳು, ಸ್ವಯಂ ಉದ್ಯೋಗಾವಕಾಶಗಳು ಮತ್ತು ಉದ್ಯಮಶೀಲತೆಗೆ ಇರುವ ಪ್ರೋತ್ಸಾಹಕಗಳು, ಸ್ಥಳೀಯ ಮಟ್ಟದಲ್ಲಿ ಲಭ್ಯವಿರುವ ವೃತ್ತಿ ಅವಕಾಶಗಳು ಸೇರಿದಂತೆ ಭವಿಷ್ಯದಲ್ಲಿ ಯಾವ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗಾವಕಾಶಗಳು ದೊರೆಯಲಿವೆ ಎಂಬಿತ್ಯಾದಿ ಅಂಶಗಳ ಕುರಿತು ಮಾಹಿತಿಯನ್ನು ತಜ್ಞರು ಒದಗಿಸಲಿದ್ದಾರೆ. ಈ ಮೇಳದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಸಂಸ್ಥೆ, ಜಿಟಿಟಿಸಿ, ಐಐಟಿ, ಐಐಐಟಿ, ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯದಂತಹ ಅತ್ಯುನ್ನತ ಸಂಸ್ಥೆಗಳು ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಮುಂದೆ ಹಲವಾರು ಆಯ್ಕೆಗಳಿದ್ದು, ಯಾವ ಕ್ಷೇತ್ರವನ್ನು ಆಯ್ಕೆ ಮಾಡಲಿ ಎಂಬ ಗೊಂದಲ ಮೂಡುವುದು ಸಹಜ. ಈ ಎಲ್ಲ ಗೊಂದಲಗಳಿಗೆ ಪರಿಹಾರವಾಗಿ ಡಯಟ್‌ದಲ್ಲಿ ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸಿ ಜಿಲ್ಲೆಯ ಎಲ್ಲ ವಿದ್ಯಾ ಸಂಸ್ಥೆಗಳು ಹಾಗೂ ಲಭ್ಯವಿರುವ ಕೋರ್ಸ್‌ಗಳ ಮಾಹಿತಿಗಳನ್ನು ಒಂದೇ ಕಡೆ ದೊರೆಯುವಂತೆ ಮಾಡಲಾಗುವುದು. ಹತ್ತನೇ ತರಗತಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಉಪನಿರ್ದೇಶಕರು(ಅ) ಹಾಗೂ ಪ್ರಾಚಾರ್ಯರು ಡಯಟ್ ಬಿ.ಎಂ. ನಾಲತವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 