ವಾಲಿಬಾಲ್ : ಪ್ರಥಮ ಸ್ಥಾನದೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆ
Volleyball: Selected for the taluk level with first place
ಕಂಪ್ಲಿ ಸೆ.01: ಕಂಪ್ಲಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ರೈನ್ ಬೋ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳು ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಶಾಲೆಯ ಕೀರ್ತಿ ಪತಾಕಿ ಹಾರಿಸಿದ್ದಾರೆ.
ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಆವರಣದಲ್ಲಿ ಶಿಕ್ಷಣ ಇಲಾಖೆ ನೇತೃತ್ವದಲ್ಲಿ 2025-26ನೇ ಸಾಲಿನ ಕಂಪ್ಲಿ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ರೈನ್‌ಬೋ ಗ್ಲೋಬಲ್ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಇಲ್ಲಿನ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯಾದಲ್ಲಿ ಅಮೋಘ ಪ್ರದರ್ಶನದೊಂದಿಗೆ ಪ್ರಥನ ಸ್ಥಾನ ಪಡೆದು, ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಲಗ್ಗೆ ಇಟ್ಟಿದ್ದಾರೆ.
ಇದರಿಂದ ಶಾಲೆಗೆ ಕೀರ್ತಿ ತರುವ ಜೊತೆಗೆ ಶಿಕ್ಷಣ ಪ್ರೇಮಿಗಳ ಮನ ಗೆದ್ದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ರೈನ್ ಬೋ ಗ್ಲೋಬಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಕಾರ್ಯದರ್ಶಿ ಮತ್ತು ಪುರಸಭೆ ಸದಸ್ಯ ಕೆ.ಎಸ್ ಚಾಂದ್‌ಬಾಷಾ, ಸಂಸ್ಥೆಯ ಅಧ್ಯಕ್ಷ ಶಾರುಕ್, ಶೈಕ್ಷಣಿಕ ಸಂಸ್ಥೆಯ ನಿರ್ದೇಶಕ ಅಜೀಜ್, ದೈಹಿಕ ಶಿಕ್ಷಕ ಜಡೆಪ್ಪ, ಶಿವುಕುಮಾರ ಹಾಗೂ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ಶಿಕ್ಷಣ ಪ್ರೇಮಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 