ಆರ್‌ಎಸ್‌ಎಸ್ ವಿಜಯದಶಮಿ ಅಂಗವಾಗಿ ಸ್ವಯಂ ಸೇವಕರ ಪಥ ಸಂಚಲನೆ
Volunteers march on the occasion of RSS Vijayadashami
ಬ್ಯಾಡಗಿ. 24 : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ 100 ವರ್ಷ ಪೂರೈಸಿದ ಹಾಗೂ ವಿಜಯದಶಮಿ ಅಂಗವಾಗಿ ನೂರಾರು ಆರ್ ಎಸ್ ಎಸ್ ಸ್ವಯಂ ಸೇವಕರು ಪಟ್ದಣದಲ್ಲಿ ಆಕರ್ಷಕ ಪಥ ಸಂಚಲನ ನಡೆಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಿಂದ ಹೊರಟ ಪಥ ಸಂಚಲನವು ಸಮಾವೇಶಗೊಂಡ ಗಣವೇಷಧಾರಿಗಳು ಸ್ಥಳದಲ್ಲಿಧ್ವಜವಂದನೆ ಸ್ವಿಕರಿಸಿದರು.
ಬಳಿಕ ಸರತಿ ಸಾಲುಗಳಲ್ಲಿ ಶಿಸ್ತಿನ ಸಿಪಾಯಿಗಳಂತೆ ಆಕರ್ಷಕ ಪಥಸಂಚಲನದಲ್ಲಿ ಹೆಜ್ಜೆ ಹಾಕಿದವರು ಗುತ್ತೇಮ್ಮಗುಡಿ ರಸ್ತೆ, ಬಸ್ ಸ್ಟ್ಯಾಂಡ್ ಸರ್ಕಲ್, ಮುಖ್ಯೆ ರಸ್ತೆ, ದ್ಯಾಮವ್ವ ದೇವಿಯ ದೇವಸ್ಥಾನ ರಸ್ತೆ ,ಸೋಗಿ ಅವರ ರಸ್ತೆ, ತಳವಾರ ಓಣಿ ಗಾಂಧಿನಗರ ಮಾರ್ಗದಲ್ಲಿ ಸಂಚರಿಸಿದ ಪಥಸಂಚಲನೆ ತಂಡವು ಪುನಃ ತಾಲೂಕು ಕ್ರೀಡಾಂಗಣಕ್ಕೆ ಬಳಿಗೆ ಆಗಮಿಸಿ ಪಥಸಂಚಲನವನ್ನು ಸಂಪನ್ನಗೊಂಡಿತು. ಗಣವೇಷಧಾರಿಗಳು ಶಿಸ್ತಿನ ಸಿಪಾಯಿಗಳಂತೆ ರಸ್ತೆಯಲ್ಲಿ ಸಾಗುತ್ತಿದ್ದರೆ, ಗಣವೇಷಧಾರಿಗಳು ಸಾಗುತ್ತಿದ್ದ ಮಾರ್ಗದಲ್ಲಿ ಪೊಲೀಸರು ವಾಹನ ಸಂಚಾರವನ್ನು ನಿರ್ಬಂಧಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ ಹಿನ್ನೆಲೆಯಲ್ಲಿ ಬ್ಯಾಡಗಿ ಪಟ್ಟಣದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ ಹಾಕಲಾಗಿತ್ತು. ಜಿಲ್ಲಾಸಶಸ್ತ್ರ ಪೊಲೀಸ್ ಪಡೆಯನ್ನು ಬಿಗಿ ಬಂದೋಬಸ್ತಗಾಗಿ ಆಯಕಟ್ಟಿನ ಸ್ಥಳಗಳಲ್ಲಿನಿಯೋಜಿಸಲಾಗಿತ್ತು. ಮಸೀದಿ ಬಳಿಯೂ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕೈಯ್ಯಲ್ಲಿಲಾಠಿ ಹಿಡಿದು ಸಾಗುತ್ತರುವ ದೃಶ್ಯ ಮೈ ನೋಡುಗರ ಕಣ್ಮನ ಸೆಳೆಯುತ್ತಿತ್ತು ಎಲ್ಲಿಯೂ ಯಾವುದೇ ಗೊಂದಲ-ಗದ್ದಲಗಳಿಗೆ ಅವಕಾಶವಿಲ್ಲದಂತೆ ಸ್ವಯಂ ಸೇವಕರು ತಮ್ಮ ಮಾರ್ಗದಲ್ಲಿ ಸಾಗಿದರು. ಪಥಸಂಚಲನೆಯಲ್ಲಿ ಪುಟಾಣಿ ಮಕ್ಕಳಿಂದ ಹಿಡಿದು, ಯುವಕರು, ವಯಸ್ಕರು, ವೃದ್ಧರು, ಬಿಜೆಪಿ ಮುಖಂಡರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 