ಲೋಕದರ್ಶನವರದಿ
ಹುನಗುಂದ೨೪: ಮತದಾನವು ಭಾರತದ ಪ್ರತಿಯೊಬ್ಬರ ಪವಿತ್ರ ಹಕ್ಕಾಗಿದೆ. ಇದರ ಕುರಿತು ಎಲ್ಲರಲ್ಲಿಯೂ ಜಾಗೃತಿ ಮೂಡಿಸುವುದು ಇಂದಿನ ತುತರ್ು ಅಗತ್ಯವಾಗಿದೆ ಎಂದು ಪ್ರಾಚಾರ್ಯ ಪ್ರೊ. ಶಶಿಕಲಾ ಮಠ ಹೇಳಿದರು. ಇಲ್ಲಿನ ವ್ಹಿ.ಎಂ.ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಮತ್ತು ವಿಜಯ ಶಂಕರಪ್ಪ ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ರಾಜ್ಯಶಾಸ್ರ ವಿಭಾಗ ಹಾಗೂ ಎನ್.ಎಸ್.ಎಸ್. ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯಶಾಸ್ತ್ರದ ಪ್ರಾಧ್ಯಾಪಕ ಡಾ.ಪರಶುರಾಮ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ದೇಶದ ನಾಗರಿಕರು ಮತದಾನದ ಹಕ್ಕಿನಿಂದ ಉತ್ತಮವಾದ ಸರಕಾರವನ್ನು ರಚಿಸಿಕೊಳ್ಳಲು ಸಾಧ್ಯವೆಂದು ಹೇಳಿದರು.
ಲೆಪ್ಟಿನೆಂಟ್.ಎಸ್.ಬಿ.ಚಳಗೇರಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಎನ್.ಎಸ್.ಎಸ್. ಅಧಿಕಾರಿ ಡಿ.ಎಸ್.ತಿಪ್ಪೇಸ್ವಾಮಿ ಸ್ವಾಗತಿಸಿ ನಿರೂಪಿಸಿದರು. ಪ್ರೊ. ಬಿ.ಎಚ್. ಗೋಡಿ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿ ಗಳು ಭಾಗವಹಿಸಿದ್ದರು.