ಮತ ಚಲಾಯಿಸಿ ಸೂಕ್ತ ಜನ ಪ್ರತಿನಿಧಿ ಆಯ್ಕೆ ಮಾಡಿ
Vote and choose the right representative
ರಾಣಿಬೆನ್ನೂರು 16: ಪ್ರಜಾಪ್ರಭುತ್ವ, ಚುನಾವಣೆ ಮತ್ತು ಮತದಾನ ಒಂದಕ್ಕೊಂದು ನಿಕಟವಾದ ಸಂಪರ್ಕ ಹೊಂದಿರುವ ತ್ರಿಕೋನ ಅಂಶಗಳು ನಾಗರಿಕರು ಮತ ಚಲಾಯಿಸುವ ಮೂಲಕ ದೇಶದಅಭಿವೃದ್ಧಿ ಬೆಳವಣಿಗೆಗೆ ಸೂಕ್ತ ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡುವುದರ ಮೂಲಕ ಉತ್ತಮ ಸರ್ಕಾರವನ್ನು ರಚಿಸಿದರೆ ಮಾತ್ರದೇಶದ ಪ್ರಜೆಗಳ ಸರ್ವತೋಮುಖಅಭಿವೃದ್ಧಿ ಸಾಧ್ಯ ಎಂದು ವಕೀಲ ಕುಮಾರ ಮಡಿವಾಳರ ಹೇಳಿದರು
ಇಲ್ಲಿನ ಕೆಎಲ್‌ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟ ರಚನೆ ಮತ್ತು ಪ್ರಮಾಣ ವಚನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಸೂಕ್ತ ಅಭ್ಯರ್ಥಿಗಳಿಗೆ ನೀಡುವ ಮೂಲಕ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊಽ ನಾರಾಯಣ ನಾಯಕ ಅಧ್ಯಕ್ಷತೆ ವಹಿಸಿದ್ದರು. ಪ್ರೊಽ ನಾಗರಾಜ ಗವಿಯಪ್ಪನವರ. ಪೃಥ್ವಿ ಎ. ಕೃಪಾ ಮೋಟೇಬೆನ್ನೂರು. ಪ್ರೊ. ಸೋಮಶೇಖರ ಹೊನ್ನಾಳಿ ಸೇರಿದಂತೆ ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 