ಲೋಕದರ್ಶನವರದಿ
ಬ್ಯಾಡಗಿ: 18 ವರ್ಷ ಮೇಲ್ಪಟ್ಟ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ವಿದ್ಯಾಥರ್ಿಗಳನ್ನು ಹಾಗೂ ಇತರ ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಜ.6 ರಿಂದ 8 ರವೆಗೆ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ ಶರಣಮ್ಮ ಕಾರಿ ತಿಳಿಸಿದ್ದಾರೆ.
ಸ್ಥಳೀಯ ತಾಲೂಕಾ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಿನಲ್ಲಿರುವ 4 ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ವಿದ್ಯಾಥರ್ಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಕುರಿತು ಈಗಾಗಲೇ ಎಲ್ಲ ಪ್ರಾಚಾರ್ಯರಿಗೂ ಮಾಹಿತಿಯನ್ನು ನೀಡಲಾಗಿದೆ. ಅದರಂತೆ ಎಲ್ಲರೂ ನಮೂನೆ 6 ರ ಫಾರ್ಮ ನಲ್ಲಿ ವಿದ್ಯಾಥರ್ಿಗಳ ವಯಸ್ಸಿನ ಶಾಲಾ ದಾಖಲೆ, ಆಧಾರ್/ರೇಷನ್ ಕಾರ್ಡ, ತಂದೆಯ ಚುನಾವಣೆ ಗುರುತಿನ ಚೀಟಿ ಹಾಗೂ 1 ಫೋಟೋದೊಂದಿಗೆ ಅಜರ್ಿಯನ್ನು ಪಡೆದುಕೊಂಡು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ 18 ವರ್ಷ ಮೇಲ್ಪಟ್ಟ ಯುವ ಸಮೂಹ ಮತದಾರರ ಪಟ್ಟಿಯಿಂದ ದೂರ ಉಳಿಯದಂತೆ ಕ್ರಮ ವಹಿಸಬೇಕು. ಈ ಕಾರ್ಯಕ್ಕೆ ನಿಯೋಜಿಸಿದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯವರು ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಮಾಡದೆ ಕಾರ್ಯ ವಹಿಸಬೇಕು.
ಇಲ್ಲದೇ ಹೋದರೆ ಅಂತಹ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.
ಜ. 6 ರಂದು ಸ್ಥಳೀಯ ಬಸ್ ನಿಲ್ದಾಣದ ಹತ್ತಿರ ಬಿ.ಇ.ಎಸ್.ಎಂ ಹಾಗೂ ಸಕರ್ಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಥರ್ಿಗಳೊಂದಿಗೆ ಹಾಗೂ ಚುನಾವಣಾ ಸಿಬ್ಬಂದಿಯೊಂದಿಗೆ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮದ ಜಾಗೃತಿ ಮೂಡಿಸಲು ಜಾಥಾವನ್ನು ನಡೆಸಲಾಗುತ್ತಿದ್ದು, ಜಾಥಾದ ಮೆರವಣಿಗೆಯು ಎ.ಪಿ.ಎಂ.ಸಿ ಮಾರುಕಟ್ಟೆಯ ಮೂಲಕ ಸಂಗಮೇಶ್ವರ ನಗರ ಹಾಗೂ ಇನ್ನಿತರ ಭಾಗಗಳಲ್ಲಿ ಜರುಗಲಿದೆ ಎಂದು ತಹಶೀಲ್ದಾರ ಶರಣಮ್ಮ ಅವರು ಹೇಳಿದರು.
ಸಭೆಯಲ್ಲಿ ಪದವಿ ಕಾಲೇಜುಗಳ ಪ್ರಾಚಾರ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಚುನಾವಣೆಗೆ ನಿಯೋಜಿಸಿದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.