ಮತದಾರರ ಪಟ್ಟಿ ಪರಿಷ್ಕರಣೆ : ಬಿಎಲ್‌ಒಗಳ ಕಾರ್ಯವೈಖರಿ ಪರೀಶೀಲಿಸಿದ ತಹಶೀಲ್ದಾರ್ ನಿಂಗಪ್ಪ ಬಿರಾದಾರ
Voter List Revision: Tahsildar Ningappa Biradar Reviews Functioning of BLOs
ಲೋಕದರ್ಶನ ವರದಿ
ದೇವರಹಿಪ್ಪರಗಿ 10: ವಿಶೇಷ ಸಮಗ್ರ ಮತದಾರರ ಪಟ್ಟಿ 2026 (ಎಸ್ ಐಆರ್) ಪ್ರಕ್ರಿಯೆಯ ಅಂಗವಾಗಿ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ನಿಂಗಪ್ಪ ಬಿರಾದಾರ ಅವರು ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕಾರ್ಯನಿರ್ವಹಣೆಯನ್ನು ಪರೀಶೀಲಿಸಿದರು.ತಾಲೂಕಿನ ಯಲಗೋಡ ಗ್ರಾಮದದಲ್ಲಿ ಮನೆ-ಮನೆಗೆ ತೆರಳಿ ನಡೆಯುತ್ತಿರುವ ಮತದಾರರ ಪರೀಶೀಲನೆ ಮತ್ತು ಮಾಹಿತಿ ಸಂಗ್ರಹ ಕಾರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅಸ್ತಿಭದ್ರತೆಯನ್ನು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಇದನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಿಳಿಸಿದರು.
“ಯಾವೊಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಪರಿಷ್ಕರಣೆ ನಮೂನೆಗಳಲ್ಲಿ ಮಾಹಿತಿಯನ್ನು ದಾಖಲಿಸುವ ವೇಳೆ ನಿಖರತೆ ಮತ್ತು ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಬಿಎಲ್‌ಒಗಳಿಗೆ ಸೂಚನೆ ನೀಡಿದರು. ವಿಶೇಷ ಸಮಗ್ರ 2026್ಘ ಯಶಸ್ಸಿಗೆ ಅಧಿಕಾರಿಗಳ ನಿರಂತರ ಮೇಲ್ವಿಚಾರಣೆ ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು,ದೋಷರಹಿತ ಮತದಾರರ ಪಟ್ಟಿಯ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.ಇದೇ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಾದ ಸಂಗಮೇಶ ಗ್ವಾಳೇದ ಸೇರಿದಂತೆ ಕಂದಾಯ ಇಲಾಖೆಯ ಹಾಗೂ ಬಿಎಲ್‌ಒ ಸಿಬ್ಬಂದಿ ವರ್ಗ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 