ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ
ವಿಜಯಪುರ, 24: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಇಂದು ಶುಕ್ರವಾರ ನಡೆಯಿತು.
ಮಹಾವಿದ್ಯಾಲಯದ ಎನ್. ಎಸ್. ಎಸ್. ಘಟಕದ ಅಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ ಪ್ರಶಿಕ್ಷಣಾರ್ಥಿಗಳಿಗೆ ಪ್ತತಿಜ್ಞಾ ವಿಧಿ ಬೋಧಿಸಿದರು.
ಬಳಿಕ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕ ಮತ್ತು ಯುವತಿಯರ ಪಾತ್ರ ಪ್ರಮುಖವಾಗಿದೆ. ಎಲ್ಲ ಯುವ ಜನತೆ ಮತದಾನದ ಕಡೆಗೆ ಒಲವು ತೋರಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಡಾ. ಮಂಜುನಾಥ ಕೋರಿ, ಡಾ. ಜೆ. ಎಸ್. ಪಟ್ಟಣಶೆಟ್ಟಿ, ಸುನಿಲ ಎಸ್. ಪಾಟೀಲ, ಪಿ. ಡಿ. ಮುಲ್ತಾನಿ, ಡಾ. ಎಸ್. ಪಿ. ಶೇಗುಣಸಿ, ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಧ್ಯಾಪಕರಾದ ಡಾ. ಬಿ. ಎಸ್. ಹಿರೇಮಠ ಸ್ವಾಗತಿಸಿ ನಿರೂಪಿಸಿದರು.
ಫೋಟೋ ಕ್ಯಾಪ್ಷನ್:
ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯೆ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ ಪ್ರಶಿಕ್ಷಣಾರ್ಥಿಗಳಿಗೆ ಪ್ತತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಡಾ. ಎಂ. ಎಸ್. ಹಿರೇಮಠ, ಡಾ. ಮಂಜುನಾಥ ಕೋರಿ, ಡಾ. ಜೆ. ಎಸ್. ಪಟ್ಟಣಶೆಟ್ಟಿ, ಸುನಿಲ ಎಸ್. ಪಾಟೀಲ, ಪಿ. ಡಿ. ಮುಲ್ತಾನಿ, ಡಾ. ಎಸ್. ಪಿ. ಶೇಗುಣಸಿ, ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.