ಮತದಾರರ ನೋಂದಣಿಗೆ ಜಾಗೃತಿ ಕಾರ್ಯಕ್ರಮ
ಹಾವೇರಿ18: ಹದಿನೆಂಟು ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಮತಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಮತದಾರರಾಗಿ ನೋಂದಾಯಿಸಿಕೊಳ್ಳಲು ತಹಶೀಲ್ದಾರ ಕಚೇರಿಗಳಲ್ಲಿ ನಿಗದಿತ ಅಜರ್ಿ ನಮೂನೆಯನ್ನು ಪಡೆದ ಭತರ್ಿಮಾಡಿ ಸಲ್ಲಿಸಲು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಕರೆ ನೀಡಿದರು.
ನಗರದ ಹುಕ್ಕೇರಿಮಠದ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ ಮಹಿಳಾ ಸಾಂಸ್ಕೃತಿ ಉತ್ಸವ ಸಮಾರಂಭದಲ್ಲಿ ಮತದಾರರ ನೋಂದಣಿ ಕುರಿತು ಅಜರ್ಿ ನಮೂನೆಗಳನ್ನು ವಿತರಿಸಿ ಮತದಾನ ಮಹತ್ವ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕುರಿತಂತೆ ಅವರು "ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆಯನ್ನು ಎತ್ತಿಹಿಡಿಯುತ್ತೇವೆ ಎಂದು ಪ್ರತಿಯೊಂದು ಚುನಾವಣೆಯಲ್ಲಿ ನಿಭರ್ಿತರಾಗಿ ಮತ್ತು ಧರ್ಮ, ಜಾತಿ, ಜನಾಂಗ, ಭಾಷೆ ಅಥವಾ ಯಾವುದೇ ಪ್ರೇರಣೆ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ" ಎಂದು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಜಾಪ್ರಭುತ್ವದ ಗೆಲುವಿಗೆ ನಮಗೆಬೇಕಾದ ಸಕರ್ಾರವನ್ನು ಆಯ್ಕೆ ಮಾಡಲು ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ. ಮತದಾನ ಮಾಡುವ ಮುನ್ನ ಮತದಾರರಾಗಿ ನೋಂದಾಯಿಸಿಕೊಳ್ಳಲು ಕರೆ ನೀಡಿದರು.
ಹದಿನೆಂಟು ವರ್ಷ ತುಂಬಿದ ಎಲ್ಲರೂ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು. ತಮ್ಮ ತಮ್ಮ ಮನೆ, ಗ್ರಾಮಗಳಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲದ ಎಲ್ಲರಿಗೂ ಜಾಗೃತಿ ಮೂಡಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಿಕೊಳ್ಳಲು ಮನವಿ ಮಾಡಿಕೊಂಡರು.
ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಆರ್.ವಿ.ಚಿನ್ನಿಕಟ್ಟಿ, ಹುಕ್ಕೇರಿಮಠದ ಆಡಳಿತಾಧಿಕಾರಿ ಬಿ.ಬಸವರಾಜ, ಪ್ರಾಂಶುಪಾಲರಾದ ಡಾ.ಸವಿತಾ ಹಿರೇಮಠ, ಜಿ.ಎಚ್.ಕಾಲೇಜ್ ಪ್ರಾಧ್ಯಾಪಕಿ ಡಾ.ಮಹಾದೇವಿ ಕಣವಿ, ಡಯಟ್ ಉಪನ್ಯಾಸಕಿ ವಿಜಯಮ್ಮ ಆರ್.ಪಾಟೀಲ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 