ಕಮಲಾಪುರದಲ್ಲಿ ಮತದಾರರ ಜಾಗೃತಿ ಜಾಥಾ ಅಭಿಯಾನ
Voter awareness rally campaign in Kamalapura
ಲೋಕದರ್ಶನ ವರದಿ
ಧಾರವಾಡ 07: ಇಲ್ಲಿಯ ಕಮಲಾಪುರದ ಸರಕಾರಿ ಪ್ರೌಢಶಾಲೆಯ ಮಕ್ಕಳಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಿ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ ಯರಳಿ ಅವರು ಧ್ವಜ ತೋರಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಪ್ರತಿಯೊಬ್ಬ ಜಾಗೃತ ಮತದಾರರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದಲ್ಲಿ ಪಾಲ್ಗೊಂಡು ಚುನಾವಣಾ ಆಯೋಗಕ್ಕೆ ಸಹಕರಿಸಬೇಕೆಂದು ಕರೆ ನೀಡಿದರು.
ಕಮಲಾಪುರ ಗ್ರಾಮದ ಕಮತಿ ಓಣಿ, ಕೋಟಿ ಓಣಿ, ಈಶ್ವರ ಗುಡಿ ಓಣಿ, ಬಾಳಗಿ ಓಣಿ ಹಾಗೂ ಪ್ರಮುಖ ಬೀದಿಗಳಲ್ಲಿ ಜಾಥಾ ಅಭಿಯಾನ ನಡೆಸಲಾಯಿತು. ಶಾಲೆಯ ಚುನಾವಣಾ ಕ್ಲಬ್ ನೋಡಲ್ ಅಧಿಕಾರಿ ಶಿವಾನಂದ ಭಾಗೋಡಿ, ಜೆಡ್. ಆಯ್. ಮುಲ್ಲಾ, ಆರ್.ಜಿ. ನಾಯಕ, ವಾರಿಜಾಕ್ಷೀ ಭಟ್, ಕೆ. ಎಸ್.ಪಾಟೀಲ, ಎಂ.ಎಫ್.ಅಂಕಲಗಿ, ಮಂಜುಳಾ ಬಡಿಗೇರ, ವರ್ಷಾ ಪವಾರ ಮುಂತಾದವರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 