ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

ಮತದಾರರ ಪಟ್ಟಿ ಪರಿಷ್ಕರಣೆ ಆರಂಭ Voter list revision begins

 ವಿಜಯಪುರ   01: ರಾಜ್ಯಾದ್ಯಂತ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಪ್ರಾರಂಭವಾಗಿದ್ದು, ಇಂದು ಬುಧವಾರ ತಮ್ಮ ಗೃಹ ಕಚೇರಿಗೆ ಆಗಮಿಸಿದ ಬಿ.ಎಲ್‌.ಓ ಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಅಗತ್ಯ ದಾಖಲೆ ಮತ್ತು ಮಾಹಿತಿ ನೀಡಿ  ನೋಂದಣಿ ಪ್ರಕ್ರಿಯೆಯಲ್ಲಿ ಭಾಗಿಯಾದರು.ಬಳಿಕ ಮಾತನಾಡಿದ ಅವರು, ಅರ್ಹ ಯಾವೊಬ್ಬ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯಬಾರದು.  ಬೇರೆ ಊರುಗಳಲ್ಲಿ ಉದ್ಯೋಗದಲ್ಲಿರು ಜನರು, ಗುಳೆ ಹೋದವರು ಸೇರಿದಂತೆ ಯಾರ ಹೆಸರನ್ನೂ ಕೈ ಬಿಡಬಾರದು. 

ನಾವೂ ಕೂಡ ಪಕ್ಷದಿಂದ ಜನಜಾಗೃತಿ ಮೂಡಿಸುತ್ತಿದ್ದೇವೆ.  ಅರ್ಹ ಮತದಾರರು ತಮ್ಮ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಮತ್ತು ಮಾಹಿತಿ ನೀಡಿ ಸಹಕರಿಸಬೇಕು.  ಮತದಾರರ ಪಟ್ಟಿಯಲ್ಲಿ ವಿವರಗಳು ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವ ಕುರಿತು ಖಚಿತಪಡಿಸಿಕೊಳ್ಳಬೇಕು.  ಈ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು.  ಮತ ಪ್ರತಿಯೊಬ್ಬರ ಹಕ್ಕಾಗಿದ್ದು, ಪ್ರತಿಯೊಂದು ಮತ ರಾಜ್ಯ ಮತ್ತು ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.  ಹೀಗಾಗಿ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಾಗಿರುವ ಕುರಿತು ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಅನರ್ಹರು, ಎರಡು ಕಡೆ ಹೆಸರು ಹೊಂದಿರುವವರ ವ್ಯಕ್ತಿಗಳ ಒಂದು ಕಡೆಯ ಹೆಸರನ್ನು ಬೇಕಿದ್ದರೆ ತೆಗೆಯಲಿ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದರು.ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಮತ್ತು ವಿಜಯಪುರ ನಗರ ವಿಧಾನಸಭೆ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 46ರ ಬಿ.ಎಲ್‌.ಓ ಎ. ಎಚ್‌. ಬಿಜ್ಜೂರ, ಮೇಲ್ವಿಚಾರಕ ಸುರೇಶ ಬಿರಾದಾರ ಹಾಗೂ ಸಿಬ್ಬಂದಿ ಉಸ್ಥಿತರಿದ್ದರು.