ಮತದಾರರ ಪಟ್ಟಿ ಪರಿಷ್ಕರಣೆ ತೀವ್ರ: 2.05 ಲಕ್ಷ ಮತದಾರರ ಪರೀಶೀಲನೆ
Voter list revision in full swing: 2.05 lakh voters verified
ಲೋಕದರ್ಶನ ವರದಿ
ಕಾಗವಾಡ 30 : ಗಡಿ ಭಾಗದ ಮತದಾರರನ್ನು ಗುರುತಿಸುವ ಕಾರ್ಯ ಸೇರಿದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೆಲಸ ವೇಗವಾಗಿ ನಡೆಯುತ್ತಿದೆ ಎಂದು ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾಂವಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಮನೆಮನೆ ಭೇಟಿ ಮೂಲಕ ಪರೀಶೀಲನೆ ನಡೆಯುತ್ತಿದೆ ಎಂದು ಹೇಳಿದರು. ಕೆಲವೊಂದು ಸಂದರ್ಭಗಳಲ್ಲಿ ಮನೆಗೆ ಮೂರು ಬಾರಿ ಭೇಟಿ ನೀಡಿದರೂ ಸಂಪರ್ಕವಾಗದವರ ಹೆಸರುಗಳನ್ನು ಪಟ್ಟಿ ಪರೀಶೀಲನೆಯ ಭಾಗವಾಗಿ ಗುರುತಿಸಲಾಗುತ್ತಿದೆ ಎಂದು ವಿವರಿಸಿದರು.
ಕಾಗವಾಡದಲ್ಲಿ ಒಟ್ಟು 2,05,390 ಮತದಾರರಿದ್ದು, ಇದರಲ್ಲಿ ಈಗಾಗಲೇ 1,97,167 ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ. ಉಳಿದವರ ಪರೀಶೀಲನೆಗಾಗಿ ಮೂರು ತಂಡಗಳನ್ನು ನಿಯೋಜಿಸಲಾಗಿದೆ.
ಈ ಕಾರ್ಯದಲ್ಲಿ ತಹಶೀಲ್ದಾರ್ ರವೀಂದ್ರ ಹಾದಿಮನಿ, ಗ್ರೇಡ್-2 ತಹಶೀಲ್ದಾರ್ ರಶ್ಮಿ ಜಕಾತೆ, ತಾ.ಪಂ. ಇಓ ವೀರಣ್ಣ ವಾಳೀ, ಚುನಾವಣಾಧಿಕಾರಿ ಮಹಾಂತೇಶ ಬಾದವಾಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 