ಬೆಳಗಾವಿ, 01: ಗಾಲಿಕುಚರ್ಿ, ಬ್ರೈಲ್ ಮತಚೀಟಿ ಒದಗಿಸುವುದು ಸೇರಿದಂತೆ ಮತದಾನದ ದಿನ ದಿವ್ಯಾಂಗರಿಗೆ ಕಲ್ಪಿಸಲಾಗುವ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡು ದಿವ್ಯಾಂಗರ ಮತದಾನಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದರು.
ಮತಗಟ್ಟೆಗಳಲ್ಲಿ ವಿಕಲಚೇತನರಿಗೆ ಒದಗಿಸಲಾಗುವ ವಿವಿಧ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಏ.1ರಂದು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತಚೀಟಿ ಸೇರಿದಂತೆ ಮತದಾನ ಜಾಗೃತಿ ಕುರಿತು ತಯಾರಿಸಲಾಗುವ ಕೆಲವು ಪ್ರಚಾರ ಸಾಮಗ್ರಿಗಳು ಬ್ರೈಲ್ ಲಿಪಿಯಲ್ಲಿರಬೇಕು.
ದಿವ್ಯಾಂಗ ಮತದಾರರ ಅನುಕೂಲಕ್ಕಾಗಿ ಕಲ್ಪಿಸಲಾಗಿರವ ಸೌಲಭ್ಯಗಳ ಮಾಹಿತಿಯನ್ನು ಒಳಗೊಂಡ ಮಾಹಿತಿ ಪುಸ್ತಕವನ್ನು ತಕ್ಷಣವೇ ತಯಾರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ತರಬೇತಿ ನೀಡುವಾಗಲೂ ಕಡ್ಡಾಯವಾಗಿ ದಿವ್ಯಾಂಗರಿಗೆ ಒದಗಿಸಬೇಕಿರುವ ಸೌಲಭ್ಯಗಳ ಕುರಿತು ಮಾಹಿತಿಯ ಒಳಗೊಂಡಿರಬೇಕು ಎಂದು ತುಷಾರ್ ಗಿರಿನಾಥ್ ಹೇಳಿದರು.
ಮತಗಟ್ಟೆಗಳಿಗೆ ಆಗಮಿಸುವ ದಿವ್ಯಾಂಗರ ಸಂಖ್ಯೆಗೆ ಅನುಗುಣವಾಗಿ ಗಾಲಿಕುಚರ್ಿಗಳ ವ್ಯವಸ್ಥೆ ಕಲ್ಪಿಸಬೇಕು. ಸಾಧ್ಯವಾದರೆ ಗಾಲಿಕುಚರ್ಿ ಅಗತ್ಯವಿರುವ ಮತದಾರರನ್ನು ಮುಂಚಿತವಾಗಿಯೇ ಗುರುತಿಸಿ, ಹೆಸರು ನೋಂದಾಯಿಸಿಕೊಂಡು ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.
ಮತಗಟ್ಟೆಗಳಲ್ಲಿ ಕುಡಿಯುವ ನೀರು, ರ್ಯಾಂಪ್ ಸೌಲಭ್ಯಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲಕರ್ ಅವರು ಮತಗಟ್ಟೆಗಳಲ್ಲಿ ದಿವ್ಯಾಂಗರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಇಬ್ರಾಹಿಂ ಮೈಗೂರ, ಉಪ ವಿಭಾಗಾಧಿಕಾರಿಗಳಾದ ಡಾ.ಕವಿತಾ ಯೋಗಪ್ಪನವರ, ಸೋಮಲಿಂಗ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಮತ್ತಿತರರು ಉಪಸ್ಥಿತರಿದ್ದರು.