ಬೆಳಗಾವಿ, ಏಪ್ರಿಲ್ 10 : ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರುಗಳ ಸೂಚನೆ ಮೇರೆಗೆ ಏಪ್ರೀಲ್ 10 ರಂದು ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಮತ್ತು ಆಶಾ ಕಾರ್ಯಕತರ್ೆಯರು ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಿಂದ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಐಕಾನ್ ರಾಘವೇಂದ್ರ ಅನ್ವೇಕರ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಪ್ಪಾಸಾಹೇಬ ನರಟ್ಟಿ, ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಎ.ಡಿ.ಹೆಚ್.ಓ ಡಾ. ಮುನ್ಯಾಳ, ಜಿಲ್ಲಾ ಆಯುಷ್ ಅಧಿಕಾರಿ ಡಾ.ದೊಡವಾಡ, ಡಾ.ಸುಣಧೊಳಿ, ಡಾ.ಶಶಿಧರ ನಾಡಗೌಡ, ಆರೋಗ್ಯಾಧಿಕಾರಿಗಳು, ಮಹಾನಗರ ಪಾಲಿಕೆ, ಬೆಳಗಾವಿ ಜಿಲ್ಲಾ ಸ್ವೀಪ್ ಸಮಿತಿಯ ಸಹಾಯಕ ಅಧಿಕಾರಿ ರವಿ ಭಜಂತ್ರಿ, ಬೆಳಗಾವಿ ಉಪನಿದರ್ೇಶಕರು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಿ.ಬಿ ರಂಗಯ್ಯ, ಸಿ-ವಿಜಲ್ನ ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಿ.ಜಿ. ನಾಗೇಶ, ತಾಲೂಕಾ ಯೋಜನಾಧಿಕಾರಿಗಳಾದ ಪಿ.ಪಿ. ದೇಶಪಾಂಡೆ, ಬೆಳಗಾವಿ ಜಿಲ್ಲಾ ಪಂಚಾಯತ ಲೆಕ್ಕ ಅಧೀಕ್ಷಕರಾದ ಎ.ಪಿ.ಬಸನಾಳ, ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 600 ಜನರು ಭಾಗವಹಿಸಿದ್ದರು.