3 ಮಹಾನಗರ ಪಾಲಿಕೆಗೆ ಆ.31ಕ್ಕೆ ಮತದಾನ


ಬೆಂಗಳೂರು 09: ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಸೇರಿ ಮೂರು ಮಹಾನಗರ ಪಾಲಿಕೆಗಳ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅಜರ್ಿಯನ್ನು ಹೈಕೋಟರ್್ ಗುರುವಾರ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿದೆ. 

ಮೂರು ಮಹಾನಗರ ಪಾಲಿಕೆಗೆ ಆಗಸ್ಟ್ 31ಕ್ಕೆ ಮತದಾನ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ. 

ಆಗಸ್ಟ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟ, ಆ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ, ಆ.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ವಿವರಿಸಿದೆ. 

ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಅವರು ಆಗಸ್ಟ್ 29ರಂದು ರಾಜ್ಯದ 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತ್ ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದರು. 

ಶಿವಮೊಗ್ಗ, ಮೈಸೂರು ಹಾಗೂ ತುಮಕೂರು ಮಹಾನಗರ ಪಾಲಿಕೆ ಮೀಸಲಾತಿ ವಿಚಾರ ಕೋಟರ್್ ನಲ್ಲಿದ್ದು, ತೀಪು ಹೊರಬಂದ ಬಳಿಕ ಮೂರು ಪಾಲಿಕೆಯ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದರು.