ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಅಂತ್ಯ

ಬೆಂಗಳೂರು 13: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. 

ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಒಟ್ಟಾರೆ ಶೇ. 76.9 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚನ್ನಪಟ್ಟಣದಲ್ಲಿ ಸಂಜೆ 5 ಗಂಟೆಯವರೆಗೆ ಶೇ. 84.26 ರಷ್ಟು ಮತದಾನವಾಗಿದೆ ಮತ್ತು 6 ಗಂಟೆಯವರೆಗೆ ಶೇ. 90 ರಷ್ಟು ಮತದಾನವಾಗಿರುವ ಸಾಧ್ಯತೆ ಇದೆ.

ಇನ್ನೂ ಸಂಡೂರಿನಲ್ಲಿ ಶೇ.71.47 ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.